ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಪು: ಬಾವಿಯೊಳಗೆ ಆಕ್ಸಿಜನ್‌ ಸಿಗದೇ ರಿಂಗ್‌ ಕಾರ್ಮಿಕರಿಬ್ಬರು ಮೃತ್ಯು

ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
04:07 PM Apr 23, 2024 IST | Chaitra Kulal

ಮಂಗಳೂರು: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.

Advertisement

ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಆಲಿ(24) ಎಂದು ಗುರುತಿಸಲಾಗಿದೆ.

ಸುಮಾರು 30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿ ನಂತರ ಸ್ವಚ್ಚ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದೇ ಇದ್ದಾಗ ಅವನನ್ನು ನೋಡಲು ಇನ್ನೊಬ್ಬ ಕಾರ್ಮಿಕ ಇಳಿದಿದ್ದು, ಇಬ್ಬರೂ ಆಕ್ಸಿಜನ್‌ ಸಿಗದೇ ಮೃತಪಟ್ಟಿದ್ದಾರೆ.

Advertisement

ನಂತರ ಸ್ಥಳಿಯರ ಸಹಾಯದಿಂದ ಫ್ರೆಂಡ್ಸ್‌ ವಿಟ್ಲ ಮುರಳೀಧರ ರವರು ಎರಡು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಇಬ್ರಾಹಿಂ ಎನ್ನುವವರು ಕಳೆದ ಇಪ್ಪತ್ತು ವರ್ಷದಿಂದ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು ಎಂದು ತಿಳಿದು ಬಂದಿದೆ.

Advertisement
Tags :
deathlaborLatestNewsmangaloreNewsKarnatakaOXYGENwellಕೇಪು
Advertisement
Next Article