ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಖಲಿಸ್ತಾನಿ ಭಯೋತ್ಪಾದಕ ಪಾಕ್‌ನಲ್ಲಿ ಸಾವು

ಖಲಿಸ್ತಾನಿ ಭಯೋತ್ಪಾದಕ ಲಖ್ಖೀರ್‌ ಸಿಂಗ್‌ ರೋಡ್‌ ಹೃದಯಾಘಾತದಿಂದ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ತಿಳಿಸಿವೆ.
02:53 PM Dec 05, 2023 IST | Ashitha S

ಇಸ್ಲಾಮಾಬಾದ್: ಖಲಿಸ್ತಾನಿ ಭಯೋತ್ಪಾದಕ ಲಖ್ಖೀರ್‌ ಸಿಂಗ್‌ ರೋಡ್‌ ಹೃದಯಾಘಾತದಿಂದ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ತಿಳಿಸಿವೆ.

Advertisement

ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಸೋದರಳಿಯ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ (72), ಭಿದ್ರಾನ್‌ವಾಲೆ ಸಾವಿನ ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿದ್ದ. ಡಿ.2 ರಂದು ಲಖ್ಖೀರ್‌ ಕೂಡ ಮೃತಪಟ್ಟಿದ್ದಾನೆ. ಲಖ್ಖೀರ್‌ ಸಿಂಗ್‌ ರೋಡ್ ನಿಷೇಧಿತ ಸಂಘಟನೆ ‘ಖಲಿಸ್ತಾನ್ ಜಿಂದಾಬಾದ್ ಫೋರ್ಸ್’ ಮುಖ್ಯಸ್ಥನಾಗಿದ್ದ. ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ.

ಪಂಜಾಬ್‌ಗೆ ಡ್ರಗ್ಸ್, ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ಬಾಂಬ್‌ಗಳನ್ನು ಕಳುಹಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಈತ ರಾಜ್ಯದ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಶಂಕಿಸಲಾಗಿತ್ತು.

Advertisement

Advertisement
Tags :
crimedeathindiaKhalistaniLatestNewsNewsKannadaTERRORISTನವದೆಹಲಿ
Advertisement
Next Article