ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

‘ಕಾಟೇರ’ ಸಿನಿಮಾ ವೀಕ್ಷಿಸಿದ ಕಿಚ್ಚ ಸುದೀಪ್

ಕಾಟೇರ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದೀಗ ಕಾಟೇರ ಸಿನಿಮಾ ಕಿಚ್ಚ ಸುದೀಪ್ ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.
03:23 PM Jan 16, 2024 IST | Ramya Bolantoor

ಕಾಟೇರ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದೀಗ ಕಾಟೇರ ಸಿನಿಮಾ ಕಿಚ್ಚ ಸುದೀಪ್ ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ. ಸುದೀಪ್ ಕಾಟೇರ ಸಿನಿಮಾವನ್ನು ವೀಕ್ಷಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸುದೀಪ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Advertisement

ಈ ಹಿಂದೆ ನಡೆದ ಸೆಲೆಬ್ರಿಟಿ ಶೋಗೆ ಬರುವಂತೆ ಸುದೀಪ್ ಅವರಿಗೆ ಕಾಟೇರ ತಂಡದಿಂದ ಕರೆ ಹೋಗಿತ್ತು. ಕಿಚ್ಚ ಶೂಟಿಂಗ್ ನಲ್ಲಿ ಇರುವ ಕಾರಣದಿಂದಾಗಿ ಬರುವುದಕ್ಕೆ ಆಗಿರಲಿಲ್ಲ. ಆದರೆ ಅತೀ ಶೀಘ್ರದಲ್ಲೇ ಸಿನಿಮಾ ನೋಡುವುದಾಗಿ ಸುದೀಪ್ ಹೇಳಿದ್ದರು.

ಸಿನಿಮಾ ಬಿಡುಗಡೆ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈ ಕುರಿತಂತೆ ದರ್ಶನ್ ಅಭಿಮಾನಿಗಳು ಪೋಸ್ಟ್ ಮಾಡಿದ್ದರು. ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದರು.

Advertisement

Advertisement
Tags :
FILMSLatestNewsNewsKannada
Advertisement
Next Article