ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

3ನೇ ಟೆಸ್ಟ್ ಪಂದ್ಯದಿಂದ ‘ಕೆ.ಎಲ್ ರಾಹುಲ್’ ಔಟ್

ರಾಜ್ಕೋಟ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಭಾರತದ ಬ್ಯಾಟಿಂಗ್ ದಿಗ್ಗಜರಲ್ಲಿ ಒಬ್ಬರಾದ ಕೆ.ಎಲ್ ರಾಹುಲ್ ಹೊರಗುಳಿದಿದ್ದಾರೆ.
07:15 PM Feb 12, 2024 IST | Ashitha S

ನವದೆಹಲಿ: ರಾಜ್ಕೋಟ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಭಾರತದ ಬ್ಯಾಟಿಂಗ್ ದಿಗ್ಗಜರಲ್ಲಿ ಒಬ್ಬರಾದ ಕೆ.ಎಲ್ ರಾಹುಲ್ ಹೊರಗುಳಿದಿದ್ದಾರೆ.

Advertisement

ಹಿರಿಯ ಆಯ್ಕೆ ಸಮಿತಿಯು ಕಳೆದ ಮೂರು ಟೆಸ್ಟ್ ಪಂದ್ಯಗಳಿಗೆ ಕರ್ನಾಟಕದ ಬ್ಯಾಟ್ಸ್ಮನ್ ಹೆಸರನ್ನ ಹೆಸರಿಸುವಾಗ ರೈಡರ್’ನ್ನ ಸೇರಿಸಿತ್ತು. ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಅವರ ಭಾಗವಹಿಸುವಿಕೆಯು ಬಿಸಿಸಿಐ ವೈದ್ಯಕೀಯ ತಂಡದಿಂದ ಫಿಟ್ನೆಸ್ ಕ್ಲಿಯರೆನ್ಸ್ಗೆ ಒಳಪಟ್ಟಿರುತ್ತದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನು  ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ರಾಹುಲ್ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುತ್ತಿರುವುದು ಖಚಿತವಾಗಿದೆ. ಅಲ್ಲದೆ ರಾಹುಲ್ ಬದಲಿಯಾಗಿ ರಣಜಿ ಟ್ರೋಫಿಯಲ್ಲಿ ಶತಕಗಳ ಸರಮಾಲೆ ಕಟ್ಟಿರುವ ಮತ್ತೊಬ್ಬ ಕನ್ನಡಿಗ ದೇವದತ್ ಪಡಿಕ್ಕಲ್ ಅವರನ್ನು ಟೀಂ ಇಂಡಿಯಾಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗುತ್ತಿದೆ.

Advertisement

ಪ್ರಸಕ್ತ ರಣಜಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವ ಪಡಿಕ್ಕಲ್ ಕಳೆದ 8 ಇನ್ನಿಂಗ್ಸ್​ಗಳಲ್ಲಿ 4 ಶತಕ ಸಿಡಿಸಿದ್ದಾರೆ. ರಣಜಿಯಲ್ಲಿ ಮಾತ್ರವಲ್ಲದೆ, ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅನಧಿಕೃತ ಟೆಸ್ಟ್ ಸರಣಿಯಲ್ಲೂ ಪಡಿಕ್ಕಲ್ ಶತಕದ ಇನ್ನಿಂಗ್ಸ್ ಆಡಿದ್ದರು.

Advertisement
Tags :
3rd TestDevdutt PadikkalINDIA VS ENGLANDKL Rahulಕೆ.ಎಲ್.ರಾಹುಲ್
Advertisement
Next Article