For the best experience, open
https://m.newskannada.com
on your mobile browser.
Advertisement

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ ಬಗ್ಗೆ ಚೆನ್ನೈನಲ್ಲಿನ ಸರ್ವೋಚ್ಚ ನ್ಯಾಯಾಲಯದ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ನ್ಯಾಯಾಲಯ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದೆ.
05:24 PM May 10, 2024 IST | Ashika S
ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ  ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ಉಡುಪಿ: ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ ಬಗ್ಗೆ ಚೆನ್ನೈನಲ್ಲಿನ ಸರ್ವೋಚ್ಚ ನ್ಯಾಯಾಲಯದ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ನ್ಯಾಯಾಲಯ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದೆ.

Advertisement

ಕೊಡಚಾದ್ರಿ ಬೆಟ್ಟಗಳಿಂದ ಹರಿದು ಬರುವ ಪುಣ್ಯ ತೀರ್ಥಗಳು ಸಂಗಮವಾಗಿ ಅಗ್ನಿ ತೀರ್ಥ, ಕಾಶಿ ತೀರ್ಥ ಹಾಗೂ ಸೌಪರ್ಣಿಕೆಯಾಗಿ ಕೊಲ್ಲೂರಿನಲ್ಲಿ ಹರಿಯುತ್ತಿದೆ. ಆ ಈ ಪುಣ್ಯ ಕ್ಷೇತ್ರಗಳಲ್ಲಿ ಸ್ನಾನ ಮಾಡುವುದರಿಂದ ನಮ್ಮ ಪಾಪ ಕರ್ಮಗಳು ಪರಿಹಾರವಾಗುತ್ತದೆ. ಚರ್ಮ ಸಂಬಂಧಿತ ಕಾಯಿಲೆಗಳು ವಾಸಿಯಾಗುತ್ತದೆ ಎನ್ನುವ ನಂಬಿಕೆಗಳು ಶ್ರೀ ಮೂಕಾಂಬಿಕಾ ದೇವಿಯ ಕೋಟ್ಯಾಂತರ ಭಕ್ತರ ಮನದಲ್ಲಿ ಇದೆ.

ವಾರ್ಷಿಕ ಜಾತ್ರೆಯ ತೆಪ್ಪೋತ್ಸವಕ್ಕೂ ಇದೇ ಪುಣ್ಯ ನದಿಯಲ್ಲಿ ಶ್ರೀ ದೇವಿಯ ಪಾರಂಪರಿಕ ಉತ್ಸವಾಚರಣೆಗಳು ನಡೆಯುತ್ತವೆ. ದುರಂತವೆಂದರೆ ಇತ್ತೀಚಿನ ಕೆಲ ವರ್ಷಗಳಿಂದ ಕೊಲ್ಲೂರಿನಲ್ಲಿ ತಲೆ ಎತ್ತಿರುವ ಹಾಗೂ ನಿರ್ಮಾಣವಾಗುತ್ತಿರುವ ವಸತಿ ಗೃಹಗಳು, ಬಹು ಮಹಡಿಯ ಕಟ್ಟಡಗಳು ಹಾಗೂ ವಾಣಿಜ್ಯ ಕಟ್ಟಡಗಳಿಂದ ಅನುಪಯುಕ್ತ ದ್ರವ ಹಾಗೂ ಘನ ತ್ಯಾಜ್ಯಗಳು ನೇರವಾಗಿ ಪುಣ್ಯ ನದಿಯನ್ನು ಸೇರುತ್ತಿವೆ.

Advertisement

ಇದರಿಂದ ನದಿಯ ಪಾವಿತ್ರ್ಯತೆ ಹಾಳಾಗುವ ಜೊತೆಯಲ್ಲಿ ನೀರಿನಾಶ್ರಯ ಹೊಂದಿರುವ ಜಲಚರಗಳು ಹಾಗೂ ಪರಿಸರದ ಪ್ರಾಣಿ ಸಂಕುಲದ ಜೀವಕ್ಕೂ ಕುತ್ತು ತರುತ್ತಿದೆ. ಈ ಹಿನ್ನೆಲೆಯಲ್ಲಿ ಮೂಕಾಂಬಿಕಾ ದೇವಿಯ ಭಕ್ತರು ಹಾಗೂ ಪರಿಸರಾಸಕ್ತರು ಅನೇಕ ದಾಖಲೆಗಳನ್ನು ಪಡೆದುಕೊಂಡು, ನ್ಯಾಯಕ್ಕಾಗಿ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಅರ್ಜಿಯ ವಿಚಾರಣೆಗೆ ಅಂಗೀಕಾರ ನೀಡಿದ್ದು, ಕ್ಷೇತ್ರದ ಮಾಲಿನ್ಯಕ್ಕೆ ಮುಕ್ತಿ ಸಿಗುವ ಭರವಸೆ ವ್ಯಕ್ತವಾಗಿದೆ.

Advertisement
Tags :
Advertisement