ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ದಿನಾಂಕ 6 ಮೇ 2024 ರಂದು ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ಮುಂಜಾನೆ 3.30 ಕ್ಕೆ ನಿಧನರಾದರು.
02:56 PM May 06, 2024 IST | Ashitha S

ಮಂಗಳೂರು: ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ದಿನಾಂಕ 6 ಮೇ 2024 ರಂದು ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ಮುಂಜಾನೆ 3.30 ಕ್ಕೆ ನಿಧನರಾದರು.

Advertisement

ಅವರಿಗೆ 69 ವರ್ಷ ವಯಸ್ಸಾಗಿತ್ತು. ಸಣ್ಣ ಕತೆ ಮತ್ತು ಲಲಿತ ಪ್ರಬಂದ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ರೊನಾಲ್ಡ್ ಸಿಕ್ವೇರಾ ’ಶಿಕೇರಾಮ್, ಸುರತ್ಕಲ್’ ಕಾವ್ಯನಾಮದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು. ಅವರ ’ಗರ್ಜೆಕ್ ಪಡತ್’ ಕಥಾಸಂಗ್ರಹಕ್ಕೆ ಮಣಿಪಾಲದ ಡಾ| ಟಿ.ಎಮ್.ಎ. ಪೌಂಡೇಶನ್ ವತಿಯಿಂದ ವರ್ಷದ ಉತ್ತಮ ಕೃತಿ ಎಂಬ ಪ್ರಶಂಸಾ ಪುರಸ್ಕಾರ ಲಭಿಸಿತ್ತು. ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷರಾಗಿ ಕೊಂಕಣಿ ಸಾಹಿತಿ ಮತ್ತು ಕಲಾವಿದರ ಹಕ್ಕು ಮತ್ತು ಕ್ಷೇಮಾಭಿವೃದ್ದಿಗಾಗಿ ಅವಿರತ ಶ್ರಮಿಸುತ್ತಿದ್ದರು.

ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದ ಶ್ರೀಯುತರು ಪತ್ನಿ, ಇಬ್ಬರು ಪುತ್ರಿಯರು, ಅಳಿಯ ಮತ್ತು ಅಪಾರ ಬಂದುಮಿತ್ರರನ್ನು ಅಗಲಿದ್ದಾರೆ.

Advertisement

ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ, ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಪ್ರವರ್ತಕ ಮೈಕಲ್ ಡಿ ಸೊಜಾ, ಕವಿತಾ ಟ್ರಸ್ಟ್ ಅಧ್ಯಕ್ಷ ಕಿಶೂ, ಬಾರ್ಕೂರ್, ಆರ್ಸೊ ಸಂಪಾದಕ ವಿಲ್ಸನ್, ಕಟೀಲ್, ಕವಿ ಚಿಂತಕ್ ಟೈಟಸ್ ನೊರೊನ್ಹಾ, ಪತ್ರಕರ್ತ ಎಚ್.ಎಮ್. ಪೆರ್ನಾಲ್ ಮುಂತಾದ ಗಣ್ಯರು ರೊನಾಲ್ಡ್ ಸಿಕ್ವೇರಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement
Tags :
GOVERNMENTindiaKARNATAKANewsKarnatakaಕೊಂಕಣಿ ಸಾಹಿತಿಮಂಗಳೂರುರೊನಾಲ್ಡ್ ಸಿಕ್ವೇರಾ
Advertisement
Next Article