ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ‘ಅನಂತ್ ಕುಮಾರ್ ಹೆಗಡೆ’ ವಿರುದ್ಧ ದೂರು

ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ' ಎಂಬುದಾಗಿ ಮಾಧ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ.
09:49 PM Mar 12, 2024 IST | Ashitha S

ಬೆಂಗಳೂರು: "ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ" ಎಂಬುದಾಗಿ ಮಾಧ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ.

Advertisement

ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರದ ಮೂಲಕ ಟ್ವಿಟ್ ಮಾಡಿ ದೂರು ನೀಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಅದರಲ್ಲಿ ಉತ್ತರ ಕನ್ನಡದ ಸಂಸದ ಅನಂತ ಕುಮಾರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾ| ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನ್ನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ. ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಯುಡಬ್ಲ್ಯು ಜೆ ಆಗ್ರಹಿಸಿದೆ.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ವದ ಸ್ಥಾನವಿದೆ. ತಮಗೆ ಬೇಕಾದಾಗ ಮಾಧ್ಯಮವನ್ನು ಹೊಗಳುವುದು ಬೇಡವೆನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ. ಅನಂತ ಕುಮಾರ ಹೆಗಡೆ ಅವರು ಜವಾಬ್ದಾರಿಯುತ ಸಂಸದರಾಗಿದ್ದು, ಆಗಿಂದ್ದಾಗೆ ಮನಸೋ ಇಚ್ಛೆ ಮಾತನಾಡುತ್ತಿರುವುದಲ್ಲದೆ ಮಾಧ್ಯಮವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವುದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಮತ್ತು ನಾಲಿಗೆ ಹಿಡಿತವಿಲ್ಲದ ಇಂತವರನ್ನು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕೆಯುಡಬ್ಲ್ಯು ಜೆ ಒತ್ತಾಯಿಸಿದೆ.

Advertisement

 

Advertisement
Tags :
GOVERNMENTindiaKARNATAKALatestNewsNewsKannadaಅನಂತ್‌ ಕುಮಾರ್‌ ಹೆಗಡೆಮಾಧ್ಯಮ
Advertisement
Next Article