ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲಕ್ಷ್ಮೀಶ ತೋಳ್ಪಾಡಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬುಧವಾರ ಪ್ರಕಟವಾಗಿದ್ದು, ಕನ್ನಡದ ಹಿರಿಯ ಚಿಂತಕ, ಲೇಖಕ ಲಕ್ಷ್ಮೀಶ ತೋಳ್ಪಾಡಿ ಅವರು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.
07:07 PM Dec 20, 2023 IST | Ramya Bolantoor

ಬೆಂಗಳೂರು: 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬುಧವಾರ ಪ್ರಕಟವಾಗಿದ್ದು, ಕನ್ನಡದ ಹಿರಿಯ ಚಿಂತಕ, ಲೇಖಕ ಲಕ್ಷ್ಮೀಶ ತೋಳ್ಪಾಡಿ ಅವರು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement

ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆ ಪ್ರಬಂಧಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟು 24 ಭಾಷೆಗಳಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, ಮೂರು ಪ್ರಬಂಧಗಳು ಮತ್ತು ಒಂದು ಸಾಹಿತ್ಯ ಅಧ್ಯಯನ ಪ್ರಶಸ್ತಿ ಪಡೆದುಕೊಂಡಿವೆ. ಮಲಯಾಳಂ ಭಾಷೆಯಲ್ಲಿ ಖ್ಯಾತ ಬರಹಗಾರ ಇ.ವಿ. ರಾಮಕೃಷ್ಣನ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ.

Advertisement
Advertisement
Tags :
AWARDKARNATAKALatestNewsNewsKannadaಬೆಂಗಳೂರು
Advertisement
Next Article