For the best experience, open
https://m.newskannada.com
on your mobile browser.
Advertisement

ಹರ್ಯಾಣ ಸಿಎಂ ಸ್ಥಾನಕ್ಕೆ ಮನೋಹರ್‌ ಲಾಲ್ ಖಟ್ಟರ್‌ ರಾಜೀನಾಮೆ

ಲೋಕಸಭೆ ಚುನಾವಣೆಗೆ ಮುನ್ನ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಗವರ್ನರ್‌ಗೆ ಸಲ್ಲಿಸಿದ್ದಾರೆ.
12:17 PM Mar 12, 2024 IST | Ashitha S
ಹರ್ಯಾಣ ಸಿಎಂ ಸ್ಥಾನಕ್ಕೆ ಮನೋಹರ್‌ ಲಾಲ್ ಖಟ್ಟರ್‌ ರಾಜೀನಾಮೆ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಗವರ್ನರ್‌ಗೆ ಸಲ್ಲಿಸಿದ್ದಾರೆ.

Advertisement

ಹರಿಯಾಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ಯ ಆಡಳಿತ ಸಮ್ಮಿಶ್ರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ಉಭಯ ಪಕ್ಷಗಳು ವಿಫಲವಾದ ಕಾರಣ ಹರಿಯಾಣದಲ್ಲಿ ಬಿಜೆಪಿ ಮತ್ತು ಜೆಜೆಪಿ ನಡುವಿನ ಮೈತ್ರಿ ಮುರಿದು ಬೀಳುವ ಹಂತದಲ್ಲಿದೆ. ಈ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದು, ಅವರ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬೆಳವಣೆಗೆ ಬೆನ್ನಲ್ಲೇ ಬಿಜೆಪಿಯ ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರು ಸಿಎಂ ಸ್ಥಾನಕ್ಕೇರಬಹುದು ಎನ್ನಲಾಗುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಲ್​ನಿಂದ ಖಟ್ಟರ್ ಕಣಕ್ಕಿಳಿಯಬಹುದು ಎಂದು ಹೇಳಲಾಗುತ್ತಿದೆ

Advertisement

Advertisement
Tags :
Advertisement