For the best experience, open
https://m.newskannada.com
on your mobile browser.
Advertisement

ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಗಣರಾಜ್ಯೋತ್ಸವ ಪ್ರಯುಕ್ತ ಲಾಲ್​ಬಾಗ್​ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋ ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.
10:24 PM Jan 18, 2024 IST | Ashitha S
ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಗಣರಾಜ್ಯೋತ್ಸವ ಪ್ರಯುಕ್ತ ಲಾಲ್​ಬಾಗ್​ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋ ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.

Advertisement

ಬಳಿಕ ಫ್ಲವರ್ ಶೋವನ್ನು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ವೀಕ್ಷಣೆ ಮಾಡಿದ್ದು, ಸಚಿವ ರಾಮಲಿಂಗರೆಡ್ಡಿ ಕೂಡ ಸಾಥ್​ ನೀಡಿದರು. ಈ ಬಾರಿ ಫ್ಲವರ್​ ಶೋನಲ್ಲಿ 68 ಬಗೆಯ 32 ಲಕ್ಷ ಹೂವುಗಳ ಬಳಕೆ ಮಾಡಲಾಗಿದೆ. ಇಂದಿನಿಂದ ಜನವರಿ 28ರವರೆಗೆ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶವಿದ್ದು, ಬೆಳಗ್ಗೆ 6.30ರಿಂದ ಸಂಜೆ 7.30ರವರೆಗೆ ವೀಕ್ಷಿಸಬಹುದಾಗಿದೆ.

215ನೇ ಫಲಪುಷ್ಟ ಪ್ರದರ್ಶನದಲ್ಲಿ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಚನ್ನಬಸವಣ್ಣ ಪ್ರತಿರೂಪ ಅರಳಿದ್ದು, ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಸೇವಂತಿಗೆ, ಗುಲಾಬಿ ಹೂವುಗಳಿಂದ ಅನುಭವ ಮಂಟಪ ನಿರ್ಮಾಣ ಮಾಡಲಾಗಿದೆ.

Advertisement

ಫ್ಲವರ್ ಶೋ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಸಾಕಷ್ಟು ಜನ ಸ್ವಾಮೀಜಿಯವರು ನನ್ನ ಭೇಟಿ‌ಮಾಡಿದರು. ಸಾಂಸ್ಕೃತಿಕ ನಾಯಕ ಅಂತ ಬಸವಣ್ಣನವರನ್ನ ಕರೆಯಬೇಕು ಅಂತ ಒತ್ತಾಯ ಮಾಡಿದರು. ಹೀಗಾಗಿ ಕ್ಯಾಬಿನೆಟ್ ಮಿಟಿಂಗ್​ನಲ್ಲಿ ತೀರ್ಮಾನ ಮಾಡಿದ್ದೇವೆ. ಇನ್ಮುಂದೆ ಬಸವಣ್ಣನವರನ್ನ ಸಾಂಸ್ಕೃತಿಕ ನಾಯಕ ಎಂದು ಕರೆಯಲಾಗುತ್ತೆ. ಶಿಕರಿಪುರದ 46 ಎಕರೆ ಜೈಲಿನ ಜಾಗಕ್ಕೆ ಅಲ್ಲಮ ಪ್ರಭುಜಾಗಕ್ಕೆ ನಾಮಕರಣ ಮಾಡಿದ್ದೇವೆ. ಅನುಭವ ಮಂಟಪದ ಬಳಿ ಫ್ರಿಡಂ ಪಾರ್ಕ್ ಅಂತ ಪಾರ್ಕ್ ಇದೆ. ಆ ಪಾರ್ಕ್ ಗೆ ಅಲ್ಲಮ ಪ್ರಭು ಪಾರ್ಕ್ ಅಂತ ಕರೆಯಲಾಗುತ್ತೆ ಎಂದು ಹೇಳಿದ್ದಾರೆ.

Advertisement
Tags :
Advertisement