ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪೂಂಚ್ ನಲ್ಲಿ ನೆಲಬಾಂಬ್ ಸ್ಫೋಟ: ಮೂವರು ಯೋಧರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಇಂದು(ನ.01) ಹೇಳಿದ್ದಾರೆ.
02:45 PM Nov 01, 2023 IST | Ashitha S

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಇಂದು(ನ.01) ಹೇಳಿದ್ದಾರೆ.

Advertisement

ಮೆಂಧರ್ ಸೆಕ್ಟರ್ನ ಫಗ್ವಾರಿ ಗಲಿ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ನೆಲಬಾಂಬ್ ಸಕ್ರಿಯಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ರಜೌರಿಯ ಸೇನಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಒಳನುಸುಳುವಿಕೆ ನಿಗ್ರಹ ಕಾರ್ಯತಂತ್ರದ ಭಾಗವಾಗಿ, ಸೇನೆಯು ಈ ಭಾಗಕ್ಕೆ ಶಸ್ತ್ರಸಜ್ಜಿತ ಭಯೋತ್ಪಾದಕರನ್ನು ಪ್ರವೇಶಿಸದಂತೆ ತಡೆಯಲು ಸಂಭವನೀಯ ಒಳನುಸುಳುವಿಕೆ ಮಾರ್ಗಗಳನ್ನು ಪ್ಲಗ್ ಮಾಡಲು ನೆಲಬಾಂಬ್ಗಳನ್ನು ಬಳಸುತ್ತಿದೆ. ಕೆಲವೊಮ್ಮೆ ಮಳೆಯಿಂದಾಗಿ ಸ್ಫೋಟಕ ಸಾಧನಗಳು ಸ್ಥಳಾಂತರಗೊಂಡು ಆಕಸ್ಮಿಕ ಸ್ಫೋಟಗಳಿಗೆ ಕಾರಣವಾಗುತ್ತವೆ.

Advertisement

Advertisement
Tags :
GOVERNMENTindiaLatestNewsNewsKannadaನೆಲಬಾಂಬ್ ಸ್ಫೋಟಯೋಧ
Advertisement
Next Article