ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮಮಂದಿರ ಉದ್ಘಾಟನೆ ʼನ್ಯೂಯಾರ್ಕ್‌ʼನಲ್ಲಿ ಲೈವ್‌ ಟೆಲಿಕಾಸ್ಟ್‌

ಇದೇ ಜನವರಿ 22ರಂದು ಐತಿಹಾಸಿಕ ರಾಮಮಂದಿರ ಉದ್ಘಾಟನೆ ನೆರವೇರಲಿದೆ. ಜೊತೆಗೆ ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದುಕುಳಿತಿದೆ. ಅಂದು ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
11:12 AM Jan 09, 2024 IST | Ashitha S

ವಾಷಿಂಗ್ಟನ್‌: ಇದೇ ಜನವರಿ 22ರಂದು ಐತಿಹಾಸಿಕ ರಾಮಮಂದಿರ ಉದ್ಘಾಟನೆ ನೆರವೇರಲಿದೆ. ಜೊತೆಗೆ ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದುಕುಳಿತಿದೆ. ಅಂದು ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ವಿದೇಶಗಳಲ್ಲೂ ನೇರ ಪ್ರಸಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವದ ದೊಡ್ಡಣ್ಣ ಎಂದೇ ಕರೆಸಿಕೊಳ್ಳುವ ಅಮೆರಿಕ ಸಹ ನ್ಯೂಯಾರ್ಕ್ ನಗರದ ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಲೈವ್‌ಸ್ಟ್ರೀಮ್ ಮಾಡಲಿದೆ. ಜೊತೆಗೆ ಅಮೆರಿಕದಲ್ಲಿರುವ ವಿವಿಧ ಭಾರತೀಯ ರಾಯಭಾರಿ ಕಚೇರಿಗಳು ನೇರಪ್ರಸಾರ ಮಾಡುವ ಮೂಲಕ ಶ್ರೀರಾಮನ ಕೀರ್ತಿಯನ್ನು ಪಸರಿಸಲು ಸಜ್ಜಾಗಿವೆ ಎಂದು ಮೂಲಗಳು ತಿಳಿಸಿವೆ.

ಇನ್ನು ಉತ್ತರ ಪ್ರದೇಶದ ಎಲ್ಲಾ ಜೈಲುಗಳಲ್ಲಿಯೂ ಜನವರಿ 22 ರಂದು ರಾಮಮಂದಿರ ಉದ್ಘಾಟನೆ ಸಮಾರಂಭದ ನೇರಪ್ರಸಾರ ಮಾಡಲಾಗುವುದು ಎಂದು ಸಚಿವ ಧರ್ಮವೀರ್ ಪ್ರಜಾಪತಿ ತಿಳಿಸಿದ್ದಾರೆ. ಕೈದಿಗಳು ಸಹ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಸಾಧ್ಯವಾಗುತ್ತದೆ. ಸದ್ಯ ರಾಜ್ಯದಲ್ಲಿ 1.05 ಲಕ್ಷಕ್ಕೂ ಹೆಚ್ಚು ಕೈದಿಗಳಿದ್ದಾರೆ. ಅವರೂ ಈ ದೇಶದ ಪ್ರಜೆಗಳು. ಅವರು ಈ ಸಂದರ್ಭದಿಂದ ದೂರ ಉಳಿಯದಂತೆ ನೋಡಿಕೊಳ್ಳಲು, ರಾಜ್ಯದ ಎಲ್ಲಾ ಜೈಲುಗಳಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Advertisement

Advertisement
Tags :
indiaLatestNewsNewsKannadaನವದೆಹಲಿನ್ಯೂಯಾರ್ಕ್ಪ್ರಧಾನಿ ನರೇಂದ್ರ ಮೋದಿ
Advertisement
Next Article