For the best experience, open
https://m.newskannada.com
on your mobile browser.
Advertisement

ಹಾಸ್ಟೆಲ್‌ನ ತಿಂಡಿಯಲ್ಲಿ ಹಲ್ಲಿ ಪತ್ತೆ: 35 ವಿದ್ಯಾರ್ಥಿಗಳು ಅಸ್ವಸ್ಥ

ಸರ್ಕಾರಿ ಹಾಸ್ಟೆಲ್‌ನಲ್ಲಿ  ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿರುವ ಘಟನೆ ತೆಲಂಗಾಣದ ಮೇದಕ್‌ ಜಿಲ್ಲೆಯಲ್ಲಿ ನಡೆದಿದೆ. 
03:10 PM Jul 10, 2024 IST | Chaitra Kulal
ಹಾಸ್ಟೆಲ್‌ನ ತಿಂಡಿಯಲ್ಲಿ ಹಲ್ಲಿ ಪತ್ತೆ  35 ವಿದ್ಯಾರ್ಥಿಗಳು ಅಸ್ವಸ್ಥ

ತೆಲಂಗಾಣ: ಸರ್ಕಾರಿ ಹಾಸ್ಟೆಲ್‌ನಲ್ಲಿ  ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿರುವ ಘಟನೆ ತೆಲಂಗಾಣದ ಮೇದಕ್‌ ಜಿಲ್ಲೆಯಲ್ಲಿ ನಡೆದಿದೆ.

Advertisement

ರಾಮಯಂಪೇಟೆಯ ಟಿಜಿ ಮಾಡೆಲ್ ಸ್ಕೂಲ್‌ನ ವಿದ್ಯಾರ್ಥಿಗಳು ತಿಂಡಿ ತಿಂದ ಬಳಿಕ 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ವಾಂತಿ, ಬೇಧಿ ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿರ್ಲಕ್ಷ್ಯದ ಆರೋಪದ ಮೇಲೆ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ವಜಾಗೊಳಿಸಲಾಗಿದ್ದು, ಹಾಸ್ಟೆಲ್‌ನ ಉಸ್ತುವಾರಿ ಮತ್ತು ವಿಶೇಷ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮೇದಕ್ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ತಿಳಿಸಿದ್ದಾರೆ.

Advertisement

ಕೂಡಲೇ ಸ್ಪಂದಿಸಿದ ಶಾಲಾ ಅಧಿಕಾರಿಗಳು ವೈದ್ಯಕೀಯ ನೆರವು ನೀಡಿ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ವರದಿಗಳ ಪ್ರಕಾರ ಆಹಾರವನ್ನು ತಯಾರಿಸುವ ಸಮಯದಲ್ಲಿ ಹಲ್ಲಿ ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಹೇಳಲಾಗುತ್ತಿದೆ.

ಜಿಲ್ಲಾಧಿಕಾರಿ ಸೇರಿದಂತೆ ಉನ್ನತಾಧಿಕಾರಿಗಳಿಗೆ ಸಲ್ಲಿಸಿದ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಬೆಳಗ್ಗೆ ಉಪ್ಪಿಟ್ಟು ನೀಡಲಾಗಿತ್ತು, ಅದರಲ್ಲಿ ಹಲ್ಲಿ ಇರುವುದನ್ನು ವಿದ್ಯಾರ್ಥಿಗಳು ಕಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಆಡಳಿತ ಮಂಡಳಿ ಭರವಸೆ ನೀಡಿದೆ. ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಆದೇಶಿಸಲಾಗಿದೆ.

Advertisement
Tags :
Advertisement