For the best experience, open
https://m.newskannada.com
on your mobile browser.
Advertisement

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ ಅಧಿಕಾರಿಗಳು ಆತನನ್ನು ಏ. 27ರಂದು ವಶಕ್ಕೆ ಪಡೆದಿದ್ದಾರೆ.
10:13 AM Apr 29, 2024 IST | Ashitha S
ಮಂಗಳೂರು  ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ  ಮೌಲ್ಯದ ಚಿನ್ನ ಸಾಗಾಟ

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ ಅಧಿಕಾರಿಗಳು ಆತನನ್ನು ಏ. 27ರಂದು ವಶಕ್ಕೆ ಪಡೆದಿದ್ದಾರೆ.

Advertisement

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಆಗಮಿಸಿದ ಪ್ರಯಾಣಿಕ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.

ದಕ್ಷಿಣ ಕನ್ನಡ ಮೂಲದ ಪ್ರಯಾಣಿಕನಾದ ಈಗ ತನ್ನ ಗುದನಾಳದಲ್ಲಿ 54.3 ಲಕ್ಷ ರೂಪಾಯಿ ಮೌಲ್ಯದ 825 ಗ್ರಾಂ ತೂಕದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೂರು ಅಂಡಾಕಾರದ ವಸ್ತುಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ. ಇದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

Advertisement

Advertisement
Tags :
Advertisement