ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕ ಅಖಾಡ ಫೈನಲ್‌: 24 ಬಿಜೆಪಿ, ನಾಲ್ಕು ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧೆ

ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ, ಶಾಸಕ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಲೋಕಸಭೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಿತ್ತು.
04:09 PM Dec 22, 2023 IST | Ramya Bolantoor

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ, ಶಾಸಕ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಲೋಕಸಭೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಿತ್ತು. ಆ ಬಳಿಕ ಬಿಜೆಪಿ ಹೈಕಮಾಂಡ್ ಜತೆಗೂ ನಿಯೋಗ ಮಾತುಕತೆ ನಡೆಸಿತ್ತು.

Advertisement

ಇದೀಗ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಸೀಟು ಹಂಚಿಕೆ ಬಹುತೇಕ ಪೂರ್ಣಗೊಂಡಿದೆ. ಮೂಲಗಳ ಪ್ರಕಾರ, 24 ಕ್ಷೇತ್ರಗಳಲ್ಲಿ ಬಿಜೆಪಿ ಕಣಕ್ಕಿಳಿಯಲಿದ್ದು, 4 ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಮಾತುಕತೆ ನಡೆದಿದೆ. ಬಿಜೆಪಿ ಹೈಕಮಾಂಡ್​​ ಜತೆ ಮಾತುಕತೆ ನಡೆಸಿದ ನಂತರ 4 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಜೆಡಿಎಸ್ ನಿರ್ಧಾರ ಕೈಗೊಂಡಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಬಹುತೇಕ ಫಿಕ್ಸ್ ಎನ್ನಲಾಗಿದೆ.
ಮೈಸೂರು ಅಥವಾ ತುಮಕೂರು ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ಆಯ್ಕೆ ಮಾಡುವಂತೆ ಬಿಜೆಪಿ ಹೈಕಮಾಂಡ್ ಜೆಡಿಎಸ್​ಗೆ ಸಲಹೆ ನೀಡಿದೆ. ಜೆಡಿಎಸ್​ಗೆ ನಿಗದಿಪಡಿಸಲಾಗುವ ನಾಲ್ಕು ಲೋಕಸಭಾ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಿಂದ ಹೆಚ್​ಡಿ ಕುಮಾರಸ್ವಾಮಿ ಕಣಕ್ಕಿಳಿಯಲಿದೆ.

Advertisement
Advertisement
Tags :
JDSKARNATAKALatestNewsLatetsNewsNewsKannadaPOLITICSಬೆಂಗಳೂರು
Advertisement
Next Article