ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನಲ್ಲಿ ಇಂದು ಸಂಜೆಯಿಂದ 144 ಸೆಕ್ಷನ್ ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 26ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಪಾರದರ್ಷಕ ಹಾಗೂ ನ್ಯಾಯ ಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
10:09 AM Apr 24, 2024 IST | Ashitha S

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 26ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಪಾರದರ್ಷಕ ಹಾಗೂ ನ್ಯಾಯ ಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

Advertisement

ಬೆಂಗಳೂರಿನಲ್ಲಿ ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ. ಇಂದು ಸಂಜೆ 6 ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಅಲ್ಲದೇ ಇಂದು ಸಂಜೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಬೆಂಗಳೂರಿನ 5 ಲೋಕಸಭಾ ಕ್ಷೇರಗಳಲ್ಲಿ ಹೆಚ್ಚುವರಿ ಭದ್ರತೆ ಕಲ್ಪಿಸಲಾಗುತ್ತಿದೆ. 13 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

Advertisement

11 ಸಿಆರ್ ಪಿಎಫ್, 14 ಕೆ ಎಸ್ ಆರ್ ಪಿ, 40 ಸಿಎ ಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರ ನೇತೃವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Advertisement
Tags :
144 SECTIONGOVERNMENTindiaKARNATAKALatestNewsNewsKarnatakaಲೋಕಸಭಾ ಚುನಾವಣೆ
Advertisement
Next Article