ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೂರು ರಾಜ್ಯಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಘೋಷಿಸಿದ ಆಮ್​ ಆದ್ಮಿ ಪಕ್ಷ

ಆಮ್​ ಆದ್ಮಿ ಪಕ್ಷವು ಮೂರು ರಾಜ್ಯಗಳಲ್ಲಿ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದೆ. ಆಮ್​ ಆದ್ಮಿ ಪಕ್ಷವು ಗುಜರಾತ್‌ನಲ್ಲಿ ಎರಡು ಸ್ಥಾನಗಳಿಗೆ ಮತ್ತು ಮುಂಬರುವ ಲೋಕಸಭೆ ಚುನಾವಣೆಗೆ ಗೋವಾದಲ್ಲಿ ಒಂದು ಸ್ಥಾನಕ್ಕೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
09:50 AM Feb 14, 2024 IST | Ashitha S

ದೆಹಲಿ: ಆಮ್​ ಆದ್ಮಿ ಪಕ್ಷವು ಮೂರು ರಾಜ್ಯಗಳಲ್ಲಿ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದೆ. ಆಮ್​ ಆದ್ಮಿ ಪಕ್ಷವು ಗುಜರಾತ್‌ನಲ್ಲಿ ಎರಡು ಸ್ಥಾನಗಳಿಗೆ ಮತ್ತು ಮುಂಬರುವ ಲೋಕಸಭೆ ಚುನಾವಣೆಗೆ ಗೋವಾದಲ್ಲಿ ಒಂದು ಸ್ಥಾನಕ್ಕೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

Advertisement

ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಗೋವಾ ಮತ್ತು ಗುಜರಾತ್‌ನಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ದೆಹಲಿಯಲ್ಲಿ 7 ಲೋಕಸಭಾ ಸ್ಥಾನಗಳ ಪೈಕಿ ಕೇವಲ 1 ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡುವುದಾಗಿ ಈಗಾಗಲೇ ತಿಳಿಸಿದೆ. ಈ ಒಂದು ಸ್ಥಾನಕ್ಕೂ ಕಾಂಗ್ರೆಸ್​ ಅರ್ಹವಿಲ್ಲ ಆದರೆ ಮೈತ್ರಿ ಧರ್ಮ ಬಿಡಬಾರದೆಂದು ಒಂದು ಸ್ಥಾನ ನೀಡುತ್ತಿದ್ದೇವೆ ಎಂದು ಎಎಪಿ ಹೇಳಿದೆ.

Advertisement

ಕಳೆದ ವಾರ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಅಸ್ಸಾಂನ ಗುವಾಹಟಿ, ಸೋನಿತ್‌ಪುರ ಮತ್ತು ದಿಬ್ರುಗಢ ಲೋಕಸಭಾ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಏಕಪಕ್ಷೀಯವಾಗಿ ಘೋಷಿಸಿತು.

 

Advertisement
Tags :
Aam Aadmi PartyCANDIDATESindiaLatestNewsloksabhaNewsKannadaಆಮ್‌ ಆದ್ಮಿನವದೆಹಲಿ
Advertisement
Next Article