ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭೆ ಚುನಾವಣೆ ದಕ್ಷಿಣ ಕನ್ನಡ ಕ್ಷೇತ್ರ ಕೈ ಅಭ್ಯರ್ಥಿಗಳ ಆಯ್ಕೆಗೆ ಇಂದು ಎರಡನೇ ಸುತ್ತಿನ ಸಭೆ

ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಕುರಿತು ಕಾಂಗ್ರೆಸ್‌ನಲ್ಲಿ ಭಾರಿ ಚಟುವಟಿಕೆ ನಡೆಯುತ್ತಿದೆ.
12:25 PM Dec 02, 2023 IST | Ramya Bolantoor

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಕುರಿತು ಕಾಂಗ್ರೆಸ್‌ನಲ್ಲಿ ಭಾರಿ ಚಟುವಟಿಕೆ ನಡೆಯುತ್ತಿದೆ. ಈ ಕುರಿತು ದಕ್ಷಿಣ ಕನ್ನಡ ಕಾಂಗ್ರೆಸ್‌ ಅಭ್ಯರ್ಥಿಯ ಆಯ್ಕೆಗೆ ಸಂಬಂಧಪಟ್ಟಂತೆ ಜಿಲ್ಲಾ ಚುನಾವಣಾ ಉಸ್ತುವಾರಿ, ಸಚಿವ ಮಧು ಬಂಗಾರಪ್ಪ ಎರಡನೇ ಸುತ್ತಿನ ಮಹತ್ವದ ಸಭೆ ಇಂದು ಸಂಜೆ 5.30ಕ್ಕೆ ನಗರದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆಯಲಿದೆ.

Advertisement

ಈ ಸಭೆಯಲ್ಲಿ ಪಕ್ಷದ ಜಿಲ್ಲೆಯ ಎಲ್ಲಾ ಪ್ರಮುಖ ನಾಯಕರು ಪಾಲ್ಗೊಳ್ಳಲು  ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಹೇಳಿದ್ದಾರೆ.

ಇದೇ ವಿಚಾರವಾಗಿ ಸಚಿವ ಮಧು ಬಂಗಾರಪ್ಪ ಅವರು 2 ತಿಂಗಳ ಹಿಂದಷ್ಟೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಅಭ್ಯರ್ಥಿಯ ಆಯ್ಕೆ ಕುರಿತು ಸಭೆಯನ್ನುಮಾಡಿದ್ದರು. ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡರು, ಮಾಜಿ ಸಂಸದರು, ಮಾಜಿ ಶಾಸಕರು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಶಿಕ್ಷಣ ತಜ್ಞರು, ಕೈಗಾರಿಕೋದ್ಯಮಿಗಳ ಅಭಿಪ್ರಾಯ ಸಂಗ್ರಹಿಸಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವರದಿಯನ್ನು ನೀಡಿದ್ದರು.

Advertisement

ಇದೀಗ ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ನಡೆಸಿ ನಾಯಕರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಈ ಸಭೆಯ ವರದಿಯನ್ನು ಸಚಿವರು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರಿಗೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

Advertisement
Tags :
CongressKARNATAKAMEETINGNewsKannadaದಕ್ಷಿಣ ಕನ್ನಡಮಂಗಳೂರು
Advertisement
Next Article