ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭಾ ಚುನಾವಣೆಯೇ ನಮ್ಮ ಗುರಿ: ಬಿವೈ ವಿಜಯೇಂದ್ರ

ಕಾಂಗ್ರೆಸ್​ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದು, ನಂತರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿಯೇ ಬಿಜೆಪಿಯ ಟಾರ್ಗೆಟ್ ಎನ್ನಲಾಗುತ್ತಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.
06:30 PM Jan 26, 2024 IST | Ashika S

ಬೆಂಗಳೂರು: ಕಾಂಗ್ರೆಸ್​ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದು, ನಂತರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿಯೇ ಬಿಜೆಪಿಯ ಟಾರ್ಗೆಟ್ ಎನ್ನಲಾಗುತ್ತಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.

Advertisement

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಯಾವುದೇ ಆಪರೇಷನ್ ಗುರಿ ಇಲ್ಲ. ಲೋಕಸಭೆ ಚುನಾವಣೆಯೊಂದೇ ನಮ್ಮ ಗುರಿ. 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಅಂದರೆ ತಮಾಷೆ ಅನ್ನಿಸಬಹುದು. ಮೋದಿ ನಾಯಕತ್ವ, ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಬೇಕೆಂದು ಕೇಂದ್ರದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು.

ಮಂಡ್ಯ ಸಂಸದೆ ಸುಮಲತಾ ಅವರಿಗೆ ಬೇರೆ ಕ್ಷೇತ್ರ ಕೊಟ್ಟು ಜೆಡಿಎಸ್​ಗೆ ಮಂಡ್ಯ ಕ್ಷೇತ್ರವನ್ನು ನೀಡುವ ಪ್ಲಾನ್ ಮಾಡಲಾಗುತ್ತಿದೆ. ಆದರೆ, ಸುಮಲತಾ ಅವರು ಬಿಜೆಪಿಯಿಂದ ಮಂಡ್ಯದಲ್ಲಷ್ಟೇ ಸ್ಪರ್ಧಿಸುತ್ತೇನೆ ಎಂದು ಕಡ್ಡಿಮುರಿದ ಹಾಗೆ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಸುಮಲತಾ ಜೊತೆ ಫೋನ್ ಕರೆ ಮಾಡಿ ಮಾತನಾಡಿದ್ದೇನೆ. ಶೀಘ್ರದಲ್ಲೇ ಸಂಸದೆ ಸುಮಲತಾ ಭೇಟಿ ಮಾಡುತ್ತೇನೆ ಎಂದರು.

Advertisement

ಹೆಚ್​ಡಿ ಕುಮಾರಸ್ವಾಮಿ ಜೊತೆ ಚರ್ಚಿಸಿ ಯಾವ ಕ್ಷೇತ್ರಕ್ಕೆ ಟಿಕೆಟ್​ ನೀಡಿದರೆ ಒಳ್ಳೆಯದು, ಯಾವ ಕ್ಷೇತ್ರದಿಂದ ಟಿಕೆಟ್​ ನೀಡಿದರೆ ಉತ್ತಮ ಅಂತಾ ಚರ್ಚೆ ಮಾಡುತ್ತೇನೆ ಎಂದರು.

Advertisement
Tags :
LatetsNewsNewsKannadaಎಂಎಲ್ಸಿಕಾಂಗ್ರೆಸ್ಜಗದೀಶ್ ಶೆಟ್ಟರ್ಬಿಜೆಪಿಲಕ್ಷ್ಮಣ ಸವದಿವಿಜಯೇಂದ್ರ
Advertisement
Next Article