For the best experience, open
https://m.newskannada.com
on your mobile browser.
Advertisement

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
09:38 PM Mar 24, 2024 IST | Ashika S
ಲೋಕಸಭಾ ಚುನಾವಣೆ  ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.

Advertisement

ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ.

ಯಾರಿಗೆಲ್ಲ ಟಿಕೆಟ್​
ರಾಯಚೂರು ಲೋಕಸಭಾ ಕ್ಷೇತ್ರ-ರಾಜಾ ಅಮರೇಶ್ವರ ನಾಯಕ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ-ಡಾ.ಕೆ.ಸುಧಾಕರ್​​​
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ವಿಶ್ವೇಶ್ವರ ಹೆಗಡೆ ಕಾಗೇರಿ 
ಬೆಳಗಾವಿ ಲೋಕಸಭಾ ಕ್ಷೇತ್ರ-ಜಗದೀಶ್ ಶೆಟ್ಟರ್​
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಇನ್ನೂ ಪೆಂಡಿಂಗ್

Advertisement

ಮಾಜಿ ಸಚಿವ ಕೆ. ಸುಧಾಕರ್ ಅವರು ಕೊನೆಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ದಿಸಲು ಬಿಜೆಪಿ ಹೈಕಮಾಂಡ್‌ನಿಂದ ಟಿಕೆಟ್ ಪಡೆಿದಿದ್ದಾರೆ. 4 ಲೋಕಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಿಸುವುದರ ಮೂಲಕ ಬಿಜೆಪಿ ರಾಜ್ಯದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ.

Advertisement
Tags :
Advertisement