For the best experience, open
https://m.newskannada.com
on your mobile browser.
Advertisement

ಲೋಕಸಭಾ ಚುನಾವಣೆ: ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ ಜಿಲ್ಲೆಯ ಸೌಜನ್ಯ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟನ್ನನವರು  ತಿಳಿಸಿದ್ದಾರೆ.
12:21 PM Apr 05, 2024 IST | Chaitra Kulal
ಲೋಕಸಭಾ ಚುನಾವಣೆ  ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ ಜಿಲ್ಲೆಯ ಸೌಜನ್ಯ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟನ್ನನವರು  ತಿಳಿಸಿದ್ದಾರೆ.

Advertisement

ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಅವರು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ ಕೊಲೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದ ಎಲ್ಲಾ ಹೆಣ್ಣು ಮಕ್ಕಳ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿರುವುದಾಗಿ ಹೇಳಿದರು.

ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.

Advertisement

ಚುನಾವಣೆ ಹಿನ್ನೆಲೆ ಯಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸಲು ನಿರ್ಭಂದ ಇದೆ. ಆದರೆ ಸಂಘದ ಹೆಸರಿನಲ್ಲಿ ಬಡ್ಡಿ ದಂಧೆಯಲ್ಲಿ ಸಂಗ್ರಹಿಸಿದ ಅಕ್ರಮ ಲಕ್ಷಗಟ್ಟಲೆ ಹಣ ಶುಕ್ರವಾರ, ಶನಿವಾರ ಯಾವುದೇ ಭಯವಿಲ್ಲದೇ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗಿರೀಶ್ ಮಟ್ಟನ್ನ ನವರ್ , ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ದ. ಕ ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ. 24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿ ರುವುದಾಗಿ ಪ್ರಸನ್ನ ರವಿ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ತಮ್ಮಣ್ಣ ಶೆಟ್ಟಿ, ಜಯನ್ ಉಪಸ್ಥಿತರಿದ್ದರು.

Advertisement
Tags :
Advertisement