ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

10 ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ

ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.
03:18 PM Dec 22, 2023 IST | Ashika S

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

Advertisement

ಅವ್ಯವಹಾರ ಹಾಗೂ ಅಕ್ರಮ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಪೊಲೀಸ್ ಮಹಾನಿರ್ದೇಶಕ (ಲೋಕಾಯುಕ್ತ) ಪ್ರಶಾಂತ್ ಕುಮಾರ್ ಠಾಕೂರ್ ಅವರು ಕೆಸಿ ಜನರಲ್ ಆಸ್ಪತ್ರೆ ಮತ್ತು ಯಲಹಂಕ ಸಾರ್ವಜನಿಕ ಆಸ್ಪತ್ರೆಯನ್ನು ಪರಿಶೀಲಿಸಿದರು.

Advertisement

ನೆಲಮಂಗಲ, ಯಲಹಂಕ, ಕೆಆರ್ ಪುರಂ, ಜಯನಗರ, ಕೆಸಿ ಜನರಲ್ ಆಸ್ಪತ್ರೆ, ಸಂಜಯ್ ಗಾಂಧಿ ಆಸ್ಪತ್ರೆ, ಇಂದಿರಾಗಾಂಧಿ ಆಸ್ಪತ್ರೆ, ರಾಜೀವ್ ಗಾಂಧಿ ಆಸ್ಪತ್ರೆ, ಗೌಸಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಪೊಲೀಸ್ ಮಹಾನಿರೀಕ್ಷಕ ಡಾ. ಎ ಸುಬ್ರಹ್ಮಣ್ಯೇಶ್ವರ ರಾವ್ ಅವರು ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ವಾಣಿ ವಿಲಾಸ ಆಸ್ಪತ್ರೆಗೆ ಭೇಟಿ ನೀಡಿದರು.

Advertisement
Tags :
LatetsNewsNewsKannadaಅಧಿಕಾರಿಬೆಂಗಳೂರು ನಗಲೋಕಾಯುಕ್ತಸರ್ಕಾರಿ ಆಸ್ಪತ್ರೆ
Advertisement
Next Article