For the best experience, open
https://m.newskannada.com
on your mobile browser.
Advertisement

ಭಾರತಕ್ಕೆ ನನ್ನನ್ನು ಪ್ರವೇಶಿಸಲು ಬಿಡಲಿಲ್ಲ: ಲಂಡನ್ ಲೇಖಕಿ ಆರೋಪ!

ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದಲ್ಲಿ ರಾಜಕೀಯ ಪ್ರಾಧ್ಯಾಪಕಿ ಹಾಗೂ ಲೇಖಕಿ ಆಗಿರುವ ನಿತಾಶಾ ಕೌಲ್ ಅವರನ್ನು ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತೆ ಸಮ್ಮೇಳನಕ್ಕೆ ಆಹ್ವಾನ ನೀಡಿತ್ತು.
12:36 PM Feb 26, 2024 IST | Nisarga K
ಭಾರತಕ್ಕೆ ನನ್ನನ್ನು ಪ್ರವೇಶಿಸಲು ಬಿಡಲಿಲ್ಲ  ಲಂಡನ್ ಲೇಖಕಿ ಆರೋಪ
ಭಾರತಕ್ಕೆ ನನ್ನನ್ನು ಪ್ರವೇಶಿಸಲು ಬಿಡಲಿಲ್ಲ: ಲಂಡನ್ ಲೇಖಕಿ ಆರೋಪ!

ಬೆಂಗಳೂರು: ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದಲ್ಲಿ ರಾಜಕೀಯ ಪ್ರಾಧ್ಯಾಪಕಿ ಹಾಗೂ ಲೇಖಕಿ ಆಗಿರುವ ನಿತಾಶಾ ಕೌಲ್ ಅವರನ್ನು ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತೆ ಸಮ್ಮೇಳನಕ್ಕೆ ಆಹ್ವಾನ ನೀಡಿತ್ತು. ಹಾಗಾಗಿ ಕಾರ್ಯಕ್ರಮಕ್ಕೆ ಭಾಗಿಯಾಗಲು ಬೆಂಗಳೂರಿಗೆ ಬಂದಿಳಿದಿದ್ದ ಅವರನ್ನು ಅಧಿಕಾರಿಗಳು ತಡೆದು ವಿಚಾರಿಸಿ ಬಳಿಕ ಲಂಡನ್‌ಗೆ ವಾಪಸ್‌ ಕಳಿಸಿದ್ದಾರೆ.

Advertisement

ಆದ್ದರಿಂದ ಅಧಿಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಿತಾಶಾ ಕೌಲ್ ಅವರನ್ನು ಫೆಬ್ರವರಿ 24 ಮತ್ತು 25 ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಪ್ರತಿನಿಧಿಯಾಗಿ ಭಾಗವಹಿಸಲು ಕಾಂಗ್ರೆಸ್ ಸರ್ಕಾರ ಆಹ್ವಾನಿಸಿತ್ತು. ಆದರೆ, ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಅಧಿಕಾರಿಗಳು ವಾಪಸ್ ಕಳಿಸಿದ್ದಾರೆ.

ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಮೌಲ್ಯಗಳ ಕುರಿತು ಮಾತನಾಡಿದ್ದಕ್ಕೆ ನನಗೆ ಭಾರತಕ್ಕೆ ಪ್ರವೇಶವನ್ನು ನಿರಾಕರಿಸಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಿಂದ ನನ್ನನ್ನು ವಾಪಸ್‌ ಕಳುಹಿಸಲಾಯಿತು ಎಂದು ಭಾರತೀಯ ಮೂಲದ, ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದಲ್ಲಿ ರಾಜಕೀಯ ಪ್ರಾಧ್ಯಾಪಕಿ ಹಾಗೂ ಲೇಖಕಿ ಆಗಿರುವ ನಿತಾಶಾ ಕೌಲ್ ಗಂಭೀರವಾಗಿ ಆರೋಪಿಸಿದ್ದಾರೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಅವರು ಕಳುಹಿಸಿದ ಆಹ್ವಾನದ ಪ್ರತಿ ಮತ್ತು ನೋಂದಣಿ ವಿವರಗಳನ್ನು ಎಕ್ಸ್ ಮೂಲಕ ಹಂಚಿಕೊಂಡಿದ್ದಾರೆ.

Advertisement

Advertisement
Tags :
Advertisement