For the best experience, open
https://m.newskannada.com
on your mobile browser.
Advertisement

ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ : ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
07:26 PM Jul 08, 2024 IST | Chaitra Kulal
ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ   ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ನಷ್ಟ ತಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಜಿಲ್ಲಾಧಿಕಾರಿಗಳು, ಸಿಇಒ ಸಭೆಯಲ್ಲಿ ಸಚಿವ ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಶರಣ ಪ್ರಕಾಶ್ ಪಾಟೀಲ್ ಮುಂತಾದವರು ಅನುಮತಿ ಪಡೆಯದೇ ರಾಯಲ್ಟಿ ಸಂಗ್ರಹದಲ್ಲಿ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಸಿಎಂ ಗಮನಕ್ಕೆ ತಂದರು.

ಸಚಿವ ಸಂತೋಷ್ ಲಾಡ್ ಅವರು ಮಾತನಾಡಿ, ಕ್ವಾರಿ ಗಣಿಗಾರಿಕೆಯಲ್ಲಿ 50 ಲಕ್ಷ ಟನ್‌ ಪರಿಸರ ತೀರುವಳಿ ಪಡೆದರೆ, 20 ಲಕ್ಷ ಟನ್‌ಗೆ ಮಾತ್ರ ಪರ್ಮಿಟ್ ಪಡೆಯುತ್ತಾರೆ. ಹಾಗಿದ್ದರೆ ಹೆಚ್ಚಿನ ಮಟ್ಟದ ಪರಿಸರ ತೀರುವಳಿ ಪಡೆದದ್ದು ಏತಕ್ಕೆ? ರಾಜ್ಯದಲ್ಲಿ ಪರಿಸರ ತೀರುವಳಿ ಪಡೆದಿರುವುದಕ್ಕೂ, ಪರ್ಮಿಟ್ ಪಡೆದಿರುವುದಕ್ಕೂ ಅರ್ಧಕರ್ಧ ಕಡಿಮೆ ಇದೆ ಎಂದು ಸಭೆಯಲ್ಲಿ ತಿಳಿಸಿದರು. ಸಂತೋಷ್ ಲಾಡ್ ಅವರ ಮಾತಿಗೆ ಹಲವು ಸಚಿವರು ಧ್ವನಿಗೂಡಿಸಿದರು.

Advertisement

ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ ಸಿಎಂ ಇದನ್ನೆಲ್ಲಾ ತಕ್ಷಣ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಬಗ್ಗೆ ಅಗತ್ಯವಿದ್ದರೆ ಸರ್ಕಾರದಿಂದ ಹೊಸ ನೀತಿಯನ್ನೇ ರೂಪಿಸೋಣ ಎಂದು ಹೇಳಿದರು.

ಯಾವುದೇ ಜಮೀನನ್ನು ತಪ್ಪಾಗಿ ಡೀಮ್ಡ್‌ ಅರಣ್ಯ ಪಟ್ಟಿಗೆ ಸೇರಿಸಿದ್ದರೆ, ಅಂತಹದ್ದನ್ನು ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ತಿಂಗಳ ಒಳಗಾಗಿ ಜಂಟಿ ಸಮೀಕ್ಷೆ ನಡೆಸಿ ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚನೆ ನೀಡಿದರು.

Advertisement
Tags :
Advertisement