For the best experience, open
https://m.newskannada.com
on your mobile browser.
Advertisement

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯಿತು.
07:54 PM May 07, 2024 IST | Ashitha S
ಲೋಕಸಭೆ ಚುನಾವಣೆ  ಮೂರನೇ ಹಂತದ ಮತದಾನ ಮುಕ್ತಾಯ

ದೆಹಲಿ: ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯಿತು.

Advertisement

ದೇಶದಾದ್ಯಂತ ಮಧ್ಯಾಹ್ನ 3 ಗಂಟೆವರೆಗೂ ಶೇ 50ಕ್ಕಿಂತ ಹೆಚ್ಚು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಯ ವೇಳೆಗೆ ಮಹಾರಾಷ್ಟ್ರದಲ್ಲಿ ಶೇ 42.63 ರಷ್ಟು ಕಡಿಮೆ ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಶೇ 63.11 ರಷ್ಟು ಹೆಚ್ಚು ಮತದಾನವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಮಧ್ಯಾಹ್ನ 3 ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ.54.20 ರಷ್ಟು ಮತದಾನವಾಗಿತ್ತು. 14 ಕ್ಷೇತ್ರಗಳ ಪೈಕಿ ಚಿಕ್ಕೋಡಿಯಲ್ಲಿ ಅತಿ ಹೆಚ್ಚು ಶೇ.59.65, ಹಾವೇರಿಯಲ್ಲಿ ಶೇ.58.45, ಗುಲ್ಬರ್ಗದಲ್ಲಿ ಅತಿ ಕಡಿಮೆ ಶೇ.47.67ರಷ್ಟು ಮತದಾನವಾಗಿದೆ. ಸಂಜೆ 5 ರವರೆಗೆ ಕರ್ನಾಟಕದಲ್ಲಿ ಶೇ.60.05 ರಷ್ಟು ಮತದಾನವಾಗಿದೆ. ಚಿಕ್ಕೋಡಿಯಲ್ಲಿ ಗರಿಷ್ಠ 72.75% ರಷ್ಟು ಮತದಾನವಾಗಿದೆ ಮತ್ತು ಗುಲ್ಬರ್ಗದಲ್ಲಿ 57.20% ರಷ್ಟು ಕಡಿಮೆ ಮತದಾನವಾಗಿದೆ.

Advertisement

Advertisement
Tags :
Advertisement