For the best experience, open
https://m.newskannada.com
on your mobile browser.
Advertisement

ಕೆ.ಎಲ್​ ರಾಹುಲ್​ ಬಳಿ ಕ್ಷಮೆ ಕೇಳಿದ ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ

ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್​ರೈಸರ್ಸ್​​ ಹೈದರಾಬಾದ್​​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್​​​ ಹೀನಾಯವಾಗಿ ಸೋತಿತು. ಟಾಸ್​ ಗೆದ್ದು ಫಸ್ಟ್​ ಬ್ಯಾಟಿಂಗ್​ ಮಾಡಿದ ಲಕ್ನೋ ಸೂಪರ್​ ಜೈಂಟ್ಸ್​​ ನಿಗದಿತ 20 ಓವರ್​​ನಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು.
08:47 PM May 15, 2024 IST | Chaitra Kulal
ಕೆ ಎಲ್​ ರಾಹುಲ್​ ಬಳಿ ಕ್ಷಮೆ ಕೇಳಿದ ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ

ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್​ರೈಸರ್ಸ್​​ ಹೈದರಾಬಾದ್​​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್​​​ ಹೀನಾಯವಾಗಿ ಸೋತಿತು. ಟಾಸ್​ ಗೆದ್ದು ಫಸ್ಟ್​ ಬ್ಯಾಟಿಂಗ್​ ಮಾಡಿದ ಲಕ್ನೋ ಸೂಪರ್​ ಜೈಂಟ್ಸ್​​ ನಿಗದಿತ 20 ಓವರ್​​ನಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು.

Advertisement

ಈ ಗುರಿ ಬೆನ್ನತ್ತಿದ ಸನ್​ರೈಸರ್ಸ್​​ ಹೈದರಾಬಾದ್​ ತಂಡ ಅದ್ಭುತ ಪ್ರದರ್ಶನ ತೋರಿ ಕೇವಲ 9.4 ಓವರ್​​ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಜಯಭೇರಿ ಬಾರಿಸಿತ್ತು. ಹೈದರಾಬಾದ್​​ ಪರ ಅಗ್ರೆಸ್ಸಿವ್​ ಬ್ಯಾಟಿಂಗ್​ ಮಾಡಿದ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಸಿಕ್ಸರ್​​, 8 ಫೋರ್​ ಸಮೇತ 89 ರನ್​ ಸಿಡಿಸಿದ್ರು. ಇನ್ನೊಂದೆಡೆ ಇವರಿಗೆ ಸಾಥ್​ ನೀಡಿದ ಅಭಿಷೇಕ್ ಶರ್ಮಾ ಕೇವಲ 28 ಬಾಲ್​ನಲ್ಲಿ 8 ಬೌಂಡರಿ, 6 ಸಿಕ್ಸರ್ ಸಮೇತ 75 ರನ್ ಗಳಿಸಿದರು.

ಪಂದ್ಯ ಸೋತ ಬಳಿಕ ಡ್ರೆಸ್ಸಿಂಗ್​ ರೂಮ್​ ಬಳಿ ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್​​ ಕೆ.ಎಲ್​​ ರಾಹುಲ್​ ಮೇಲೆ ಕೂಗಾಡಿದ್ದರು. ರಾಹುಲ್ ತಾಳ್ಮೆಯಿಂದ ಉತ್ತರಿಸಲು ಯತ್ನಿಸಿದ್ರೂ ಗೋಯೆಂಕಾ ಅಸಭ್ಯ ವರ್ತನೆ ತೋರಿಸಿದರು. ಈ‌ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಆರ್​​ಸಿಬಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

Advertisement

ಮಾಜಿ ಕ್ರಿಕೆಟರ್ಸ್​​ ಮತ್ತು ಫ್ಯಾನ್ಸ್​ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಎಚ್ಚೆತ್ತ ಲಕ್ನೋ ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್​ ರಾಹುಲ್​ ಕ್ಷಮೆ ಕೇಳಿದ್ದಾರೆ. ನನ್ನಿಂದ ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ. ಅಭಿಮಾನಿಗಳು, ಸಪೋರ್ಟಿಂಗ್​ ಸ್ಟ್ಯಾಫ್​​ ಮತ್ತು ಕೆ.ಎಲ್​ ರಾಹುಲ್​ಗೆ ಕ್ಷಮೆ ಕೇಳುತ್ತೇನೆ ಎಂದು ವಿಡಿಯೋ ಮಾಡಿದ್ದಾರೆ.

Advertisement
Tags :
Advertisement