For the best experience, open
https://m.newskannada.com
on your mobile browser.
Advertisement

ಮಹಾದೇವ್ ಬೆಟ್ಟಿಂಗ್ ಪ್ರಕರಣ; ನಟ ಸಾಹಿಲ್ ಖಾನ್ ಗೆ ಸಮನ್ಸ್ ಜಾರಿ ಮಾಡಿದ ಪೊಲೀಸ್

ಮಹಾದೇವ್ ಬೆಟ್ಟಿಂಗ್ ಆಪ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಾಹಿಲ್ ಖಾನ್ ಸೇರಿದಂತೆ ಇನ್ನೂ ಇಬ್ಬರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.
07:03 PM Dec 15, 2023 IST | Ramya Bolantoor
ಮಹಾದೇವ್ ಬೆಟ್ಟಿಂಗ್ ಪ್ರಕರಣ   ನಟ ಸಾಹಿಲ್ ಖಾನ್ ಗೆ ಸಮನ್ಸ್ ಜಾರಿ ಮಾಡಿದ ಪೊಲೀಸ್

ಮಹಾದೇವ್ ಬೆಟ್ಟಿಂಗ್ ಆಪ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಾಹಿಲ್ ಖಾನ್ ಸೇರಿದಂತೆ ಇನ್ನೂ ಇಬ್ಬರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

Advertisement

ಬೆಟ್ಟಿಂಗ್ ಆಪ್ ನಲ್ಲಿ 15 ಸಾವಿರ ಕೋಟಿಗೂ ಅಧಿಕ ಅವ್ಯವಹಾರ ನಡೆದಿದ್ದು, ಆಪ್ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಭೋಪಾಲ್, ಮುಂಬೈ, ಕೋಲ್ಕತ್ತಾ ನಗರಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ಸಮಯದಲ್ಲಿ ಹವಾಲಾ ನಡೆದಿರುವುದು ಪತ್ತೆ ಆಗಿದೆ.

ರವಿ ಉಪ್ಪಾಲ್ ಮತ್ತು ಸೌರಭ್ ಚಂದ್ರಕಾರ್ ಎನ್ನುವವರು ಈ ಆಪ್ ಅನ್ನು ದುಬೈನಿಂದ ನಡೆಸುತ್ತಿದ್ದರು. ಬೇನಾಮಿ ಖಾತೆಗಳಿಂದ ಅಕ್ರ ಹಣ ವರ್ಗಾವಣೆ ಆಗುತ್ತಿದೆ ಎಂದು ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದರು.

Advertisement

Advertisement
Tags :
Advertisement