ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಹಾಶಿವರಾತ್ರಿ ಹಬ್ಬ: ಕೆಎಸ್‌ಆರ್‌ಟಿಸಿಯಿಂದ 1,500 ಹೆಚ್ಚುವರಿ ಬಸ್

ಮಾ.8ರ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿರುವ ಜನರು ತಮ್ಮ ಗ್ರಾಮಿಣ ಪ್ರದೇಶಗಳಿಗೆ ತೆರಳಲು ಅನುಕೂಲ ಆಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 1,500 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದಿಂದ ತಿಳಿಸಲಾಗಿದೆ.
08:14 PM Mar 04, 2024 IST | Ashika S

ಬೆಂಗಳೂರು: ಮಾ.8ರ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿರುವ ಜನರು ತಮ್ಮ ಗ್ರಾಮಿಣ ಪ್ರದೇಶಗಳಿಗೆ ತೆರಳಲು ಅನುಕೂಲ ಆಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 1,500 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದಿಂದ ತಿಳಿಸಲಾಗಿದೆ.

Advertisement

ದಿನಾಂಕ 08.03.2024 ರಂದು ಮಹಾಶಿವರಾತ್ರಿ ಹಾಗೂ ದಿನಾಂಕ:09.03.2024 ಮತ್ತು 10.03.2024 ವಾರಾಂತ್ಯ ದಿನಗಳಾಗಿರುವುದರಿಂದ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 07.03.2024 ರಿಂದ 10.03.2024 ರವರೆಗೆ ಬೆಂಗಳೂರಿನಿಂದ  1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 10.03.2024 ಹಾಗೂ 11.03.2024 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

Advertisement

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಾಗುತ್ತದೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣ, ಚೆನ್ನೆ ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.  ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

Advertisement
Tags :
LatetsNewsNewsKannadaಮಹಾಶಿವರಾತ್ರಿ
Advertisement
Next Article