ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

​ ಗೇಮ್​ನಲ್ಲಿ ಸೋತಿದ್ದಕ್ಕೆ ಬೇಸರಗೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಒಡಿಶಾದಲ್ಲಿ ಮೊಬೈಲ್​ ಗೇಮ್​ನಲ್ಲಿ ಮೂರು ಬಾರಿ ಸೋತಿದ್ದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ಬ್ಲೇಡ್​ನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ
09:12 AM Feb 18, 2024 IST | Ashika S

ಒಡಿಶಾ: ಒಡಿಶಾದಲ್ಲಿ ಮೊಬೈಲ್​ ಗೇಮ್​ನಲ್ಲಿ ಮೂರು ಬಾರಿ ಸೋತಿದ್ದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ಬ್ಲೇಡ್​ನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

Advertisement

ಬ್ಲೇಡ್​ನಿಂದ ಕತ್ತು ಸೀಳಿಕೊಂಡ ವ್ಯಕ್ತಿಯನ್ನು ಸೌಮ್ಯ ರಂಜನ್ ನಾಯಕ್ ಎಂದು ಗುರುತಿಸಲಾಗಿದೆ.

ಇದೀಗ ಆತನ ಸ್ಥಿತಿ ಗಂಭೀರವಾಗಿದ್ದು ಕಟಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆರೆಂಗ್ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

Advertisement

ವ್ಯಕ್ತಿ ಮೊಬೈಲ್ ಗೇಮ್ ಆಡುತ್ತಿದ್ದರು ಮತ್ತು ಅವರು ಮೂರು ಬಾರಿ ಸೋತಿದ್ದರಿಂದ ತನ್ನ ಕತ್ತು ಸೀಳಿಕೊಂಡರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರ ಪೋಷಕರು ಅವರನ್ನು ಅಂಗುಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಚಿಕಿತ್ಸ ಸಾಧ್ಯವಾಗದ ಕಾರಣ ಅವರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆಒಡಿಶಾವ್ಯಕ್ತಿ
Advertisement
Next Article