ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಮೂಗು ಕಚ್ಚಿ ತುಂಡರಿಸಿದ ಯುವಕ

ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ.
07:13 PM Jan 01, 2024 IST | Ashika S

ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ.

Advertisement

ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಮೂಗು ತುಂಡರಿಸಿಕೊಂಡ ಯುವಕ.

ಮೂಗು ತುಂಡರಿಸಿದ ಆರೋಪಿ ಯುವಕ ರಾಕೇಶ್ ಎಂಬಾತ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು, ಪ್ರಸ್ತುತ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ.

Advertisement

ಡಿಸೆಂಬರ್ 31 ರಂದು ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ತನ್ನ ಸ್ನೇಹಿತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಘಟನೆಯಿಂದ ಗಂಭೀರ ಗಾಯಗೊಂಡ ಯುವಕನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣ ಸಂಬಂಧ ವೇಣೂರು ಪೋಲಿಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement
Tags :
LatetsNewsNewsKannadaಕುಡಿದ ಮತ್ತಿನಲ್ಲಿಕ್ಷುಲ್ಲಕ ವಿಚಾರಗಲಾಟೆಪಾರ್ಟಿಹೊಸ ವರ್ಷ
Advertisement
Next Article