For the best experience, open
https://m.newskannada.com
on your mobile browser.
Advertisement

ಚಿಕ್ಕಬಳ್ಳಾಪುರ: ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

ಇಲ್ಲಿನ ಬಾಗೇಪಲ್ಲಿ ಪಟ್ಟಣದ ಟಿಬಿ ಕ್ರಾಸ್ ಹೋಟೆಲ್ ಬಳಿ ವ್ಯಕ್ತಿಯೊಬ್ಬರ ಕತ್ತು ಸೀಳಿ ಬರ್ಬರ ಹತ್ಯೆ ಮಡಿದ ಘಟನೆ ನಡೆದಿದೆ. 
04:06 PM Mar 24, 2024 IST | Ashika S
ಚಿಕ್ಕಬಳ್ಳಾಪುರ  ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ಇಲ್ಲಿನ ಬಾಗೇಪಲ್ಲಿ ಪಟ್ಟಣದ ಟಿಬಿ ಕ್ರಾಸ್ ಹೋಟೆಲ್ ಬಳಿ ವ್ಯಕ್ತಿಯೊಬ್ಬರ ಕತ್ತು ಸೀಳಿ ಬರ್ಬರ ಹತ್ಯೆ ಮಡಿದ ಘಟನೆ ನಡೆದಿದೆ.

Advertisement

ಆಂಧ್ರ ಮೂಲದ ದೂಮಕೇತುಪಲ್ಲಿ ಗ್ರಾಮದ ನಿವಾಸಿ ವೆಂಕಟೇಶಪ್ಪ (55) ಕೊಲೆಯಾದವರು. ವೆಂಕಟೇಶಪ್ಪ ನ ಕತ್ತು ಸೀಳಿ ಹಂತಕರು ಕೊಲೆ ಮಾಡಿ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.

ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್‌ಪಿ ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಹುಡುಕಾಟವನ್ನು ನಡೆಸಿದ್ದಾರೆ.

Advertisement

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Advertisement
Tags :
Advertisement