For the best experience, open
https://m.newskannada.com
on your mobile browser.
Advertisement

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿದ ಪತಿ

ತಾಲೂಕಿನ ಕೊಡಗನೂರು ಗ್ರಾಮದ ಬಳಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ಪತಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದಿದ್ದಾನೆ.
03:09 PM Jan 25, 2024 IST | Gayathri SG
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿದ ಪತಿ

ದಾವಣಗೆರೆ: ತಾಲೂಕಿನ ಕೊಡಗನೂರು ಗ್ರಾಮದ ಬಳಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ಪತಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದಿದ್ದಾನೆ.

Advertisement

ಮೃತ ಮಹಿಳೆಯನ್ನು ಕಾವ್ಯ (21) ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ (24) ಕೊಲೆ ಮಾಡಿದ ಪತಿ. ಐದು ವರ್ಷಗಳ ಹಿಂದೆ ಸಾಸಲುಹಳ್ಳ ಗ್ರಾಮದ ಕಾವ್ಯ ಎಂಬಾಕೆಯನ್ನು ಸಚಿನ್ ಮದುವೆಯಾಗಿದ್ದ. ದಾವಣಗೆರೆ ತಾಲೂಕಿನ ಕಡ್ಲೆಬಾಳು ಗ್ರಾಮದ ಚೈತ್ರ (21) ಎನ್ನುವ ಯುವತಿ ಜೊತೆ ಸಂಬಂಧ ಇಟ್ಟುಕೊಂಡು ಕಾವ್ಯಾಳನ್ನು ಮದುವೆಯಾಗಿದ್ದನು. ಈ ಅಕ್ರಮ ಸಂಬಂಧಕ್ಕೆ ಕಾವ್ಯಾ ಅಡ್ಡಿಯಾಗುತ್ತಿದ್ದಾಳೆ ಎಂದು ಸಚಿನ್ ಮತ್ತು ಚೈತ್ರಾ ಸೇರಿಕೊಂಡು ಕಾವ್ಯಾಳನ್ನು ಕೊಲೆ ಮಾಡಿದ್ದಾರೆ.

ಕಳೆದ 10 ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮೃತದೇಹವನ್ನು ಕೆರೆಯಿಂದ ಹೊರತೆಗೆಯಲಾಗಿದೆ.

Advertisement

Advertisement
Tags :
Advertisement