ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪತ್ನಿಗೆ 5 ಬಾರಿ ಇರಿದು ಆತ್ಮಹತ್ಯೆಗೆ ಶರಣಾದ ಪತಿ

ಇತ್ತೀಚೆಗೆ ಮಹಿಳೆಯರಿಗ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.
12:02 PM Dec 02, 2023 IST | Ashika S

ಮಡಿಕೇರಿ: ಇತ್ತೀಚೆಗೆ ಮಹಿಳೆಯರಿಗ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.

Advertisement

ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ ಮುಳುಸೋಗೆ ಗ್ರಾಮದ ಶ್ವೇತಾ ಎಂಬಾಕೆಯನ್ನು ಗ್ರಾಮದ ಪ್ರಸನ್ನ (36) ಎಂಬಾತ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ. ಆದರೆ ದಿನಕಳೆದಂತೆ ತನ್ನ ಪತ್ನಿ ಮೇಲೆ ಪ್ರಸನ್ನ ವಿಪರೀತ ಸಂಶಯ ಪಟ್ಟು ಆಕೆಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದ

ಈ ಬಗ್ಗೆ ಹಲವಾರು ಬಾರಿ ಮೈಸೂರು ಹಾಗೂ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿ, ದಂಪತಿಯ ರಾಜಿ ಸಂಧಾನ ಮಾಡಿ ಕಳುಹಿಸಿದ್ದರು. ಆದರೆ ಪ್ರಸನ್ನ ಮಾತ್ರ ಪತ್ನಿ ಮೇಲೆ ಅನುಮಾನ ಪಡುವುದು ಬಿಟ್ಟಿರಲಿಲ್ಲ. ಆಕೆಯ ತಂಗಿಯ ಮೇಲೆ ವ್ಯಾಮೋಹವೂ ಹೆಚ್ಚಾಗಿ, ಆಕೆಯೊಂದಿಗೆ ಮದುವೆ ಮಾಡಿಸು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

Advertisement

ಪತಿಯ ಕಿರುಕುಳದಿಂದ ಬೇಸತ್ತು ಶ್ವೇತಾ ಕಳೆದ ಒಂದು ತಿಂಗಳ ಹಿಂದೆ ತವರು ಮನೆಗೆ ಬಂದು ಅಲ್ಲಿಂದಲೇ ಕೆಲಸ ಮಾಡುತ್ತಿದ್ದಳು. ಗುರುವಾರ ಬೆಳಗ್ಗೆ ತವರು ಮನೆಯಿಂದ ಕೆಲಸಕ್ಕೆ ಹೊರಟಿದ್ದ ವೇಳೆ ಹೊರಗೆ ಕಾದು ಕುಳಿತಿದ್ದ ಪ್ರಸನ್ನ ಆಕೆಗೆ ಚಾಕು ತೋರಿಸಿ ತಮ್ಮ ಮನೆಗೆ ಹೋಗೋಣ ಎಂದು ಕರೆದಿದ್ದಾನೆ. ಆದರೆ ಮನೆಯಲ್ಲಿ ಯಾರೂ ಇಲ್ಲ, ಅವರೆಲ್ಲಾ ಬಂದ ಮೇಲೆ ತಮ್ಮ ಮನೆಗೆ ಹೋಗೋಣ ಎಂದು ಕೇಳಿಕೊಂಡಿದ್ದಾಳೆ.

ಹೇಳದ ಮಾತು ಕೇಳದೇ ಹೋಗಿದ್ದಕ್ಕೆ ಪ್ರಸನ್ನ ಜಗಳವಾಡಿದ್ದಾನೆ. ಹೀಗೆ ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪ್ರಸನ್ನ ಪತ್ನಿ ಶ್ವೇತಾ ಹೊಟ್ಟೆಗೆ ಹಾಗೂ ಬೆನ್ನಿಗೆ ಚಾಕುವಿನಿಂದ 5 ಬಾರಿ ಇರಿದಿದ್ದಾನೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆಕಿರುಕುಳಪ್ರಕರಣಸಂಶಯ
Advertisement
Next Article