ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ವಕ್ಫ್ ಬೋರ್ಡ್ ಅಧಿಕೃತ ಎಂಟ್ರಿ

ನಗರದ ಮಳಲಿ ಮಸೀದಿ ವಿವಾದಕ್ಕೆ ಇಂದು ವಕ್ಫ್ ಬೋರ್ಡ್ ಅಧಿಕೃತ ಎಂಟ್ರಿ ಕೊಟ್ಟಿದೆ. ಇಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ಅಧಿಕೃತವಾಗಿ ವಕಾಲತ್ತು ದಾಖಲಿಸೋ ಸಾಧ್ಯತೆ ಇದೆ ಎನ್ನಲಾಗ್ತಿದೆ
09:27 AM Feb 05, 2024 IST | Ashitha S

ಮಂಗಳೂರು: ನಗರದ ಮಳಲಿ ಮಸೀದಿ ವಿವಾದಕ್ಕೆ ಇಂದು ವಕ್ಫ್ ಬೋರ್ಡ್ ಅಧಿಕೃತ ಎಂಟ್ರಿ ಕೊಟ್ಟಿದೆ. ಇಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ಅಧಿಕೃತವಾಗಿ ವಕಾಲತ್ತು ದಾಖಲಿಸೋ ಸಾಧ್ಯತೆ ಇದೆ ಎನ್ನಲಾಗ್ತಿದೆ.

Advertisement

ದ. ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಮಳಲಿ ಮಸೀದಿ ವಕ್ಫ್ ಬೋರ್ಡ್ ಆಸ್ತಿ ಎಂದು ಪ್ರತ್ಯೇಕ ವಾದ ಮಂಡಿಸಲು ಮುಂದಾಗಿದೆ. ವಕೀಲರ ಮೂಲಕ ವಕಾಲತ್ತು ದಾಖಲಿಸಿ ಪ್ರಕರಣದಲ್ಲಿ ಅಧಿಕೃತ ಹೋರಾಟಕ್ಕೆ ವಕ್ಫ್ ಬೋರ್ಡ್ ಇಳಿದಿದೆ. ಸದ್ಯ ಹೈಕೋರ್ಟ್ ನಿಂದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್​ಗೆ ನಿರ್ದೇಶನ ಸಿಕ್ಕಿದೆ.

ಮಳಲಿ‌ ಮಸೀದಿ ಜಾಗ ವಕ್ಫ್ ಆಸ್ತಿ ಹೌದಾ  ಅಲ್ಲವಾ ಎಂದು ನಿರ್ಧರಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯ ಹೈಕೋರ್ಟ್ ಈಗಾಗಲೇ ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ. ಹೀಗಾಗಿ ಹೈಕೋರ್ಟ್ ಆದೇಶ ತಲುಪಿದ ಕೂಡಲೇ ಮಂಗಳೂರು ಕೋರ್ಟ್​ನಲ್ಲಿ ಮತ್ತೆ ವಿಚಾರಣೆ ಆರಂಭವಾಗಲಿದೆ. ಇಂದು ಆದೇಶ ತಲುಪಿದರೇ ವಾದ ಮಂಡಿಸಲು ವಿಎಚ್​ಪಿ ಪರ ವಕೀಲರಿಂದಲೂ ಅರ್ಜಿ ಸಲ್ಲಿಕೆಯಾಗಲಿದೆ. ಇನ್ನು ಮತ್ತೊಂದೆಡೆ ವಿಎಚ್​ಪಿ ಮತ್ತು ಮಳಲಿ ಮಸೀದಿ ಕಾನೂನು ಹೋರಾಟಕ್ಕೆ ವಕ್ಫ್ ಬೋರ್ಡ್ ಎಂಟ್ರಿಯಾಗಿದೆ. ಮಳಲಿ ಮಸೀದಿ ವಕ್ಫ್ ಆಸ್ತಿ ಎಂದು‌ ದಾಖಲೆ ಸಲ್ಲಿಸಲು ದಕ್ಷಿಣ ಕನ್ನಡ ವಕ್ಫ್ ಬೋರ್ಡ್ ತಯಾರಿ ನಡೆಸಿದೆ

Advertisement

 

Advertisement
Tags :
indiaNewsKannadaಮಂಗಳೂರುಮಳಲಿ ಮಸೀದಿವಕ್ಫ್ ಬೋರ್ಡ್
Advertisement
Next Article