For the best experience, open
https://m.newskannada.com
on your mobile browser.
Advertisement

ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಮಂಗಳೂರಿನ ತುಳಸಿ ಪೈ ರಿಯಾಕ್ಷನ್

ಮಂಗಳೂರಿನ ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ತುಳಸಿ ಕಾಲೇಜಿನಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಕಾಲೇಜಿನ ಆಡಳಿತ ಮಂಡಳಿ ತುಳಸಿ ಪೈ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
12:43 PM Apr 10, 2024 IST | Ashitha S
ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಮಂಗಳೂರಿನ ತುಳಸಿ ಪೈ ರಿಯಾಕ್ಷನ್

ಮಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು(ಏ.10) ಪ್ರಕಟಗೊಂಡಿದೆ.ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ.

Advertisement

ಇನ್ನು ಮಂಗಳೂರಿನ ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ತುಳಸಿ ಕಾಲೇಜಿನಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಕಾಲೇಜಿನ ಆಡಳಿತ ಮಂಡಳಿ ತುಳಸಿ ಪೈ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನು ವಿದ್ಯಾರ್ಥಿನಿ ತುಳಸಿ ಪೈ ಮಾತನಾಡಿ, ನನ್ನ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಕಾಲೇಜಿನವರು ತುಂಬಾ ಬೆಂಬಲ ನೀಡಿದ್ದಾರೆ. ಪ್ರತಿ ದಿನವೂ ಶ್ರದ್ಧೆಯಿಂದ ತಯಾರಿ ಮಾಡಿದ್ದೇನೆ. ಮುಂದೆ ಕೆನರಾ ಕಾಲೇಜಿನಲ್ಲಿ ಉನ್ನತ ವಿದ್ಯಾಭ್ಯಾಸ ಮುಂದುವರೆಸುತ್ತೇನೆ. ಚಾರ್ಟೆಡ್ ಅಕೌಂಟೆಂಟ್ ಆಗುವ ಕನಸು ಹೊಂದಿದ್ದೇನೆ. ನನಗೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸುತ್ತೇನೆ ಎಂದರು.

Advertisement

Advertisement
Tags :
Advertisement