ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗುದದಲ್ಲಿ ಚಿನ್ನ ಬಚ್ಚಿಟ್ಟು ಸಾಗಿಸುತ್ತಿದ್ದ ವ್ಯಕ್ತಿ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ಅಕ್ರಮವಾಗಿ ಅಬುದಾಭಿಯಿಂದ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
02:38 PM Mar 04, 2024 IST | Ashitha S

ಮಂಗಳೂರು: ಅಕ್ರಮವಾಗಿ ಅಬುದಾಭಿಯಿಂದ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Advertisement

729 ಗ್ರಾಂ ತೂಕದ 45,92,700 ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಈ ವ್ಯಕ್ತಿ ಅಬುಧಾಬಿಯಿಂದ ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನದಲ್ಲಿ ಆಗಮಿಸಿದ್ದ.

ಕಾಸರಗೋಡು ಮೂಲದವನಾದ ಇವನು ಮಾರ್ಚ್ 3ರಂದು ವಿಮಾನ ನಿಲ್ದಾಣಕ್ಕೆ ಬಂದಿದ್ದ ಅವನನ್ನು ಕಸ್ಟಮ್ಸ್ ಅಧಿಕಾರಿಗಳು ಪರೀಕ್ಷೆಗೆ ಒಳಪಡಿಸಿದರು. ಇದೇ ವೇಳೆ, ಆತ ಮೂರು ಮೊಟ್ಟೆಯ ಆಕಾರದ ಲಕೋಟೆಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದನಾಳದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡು, ನಂತರ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

Advertisement
Tags :
indiaLatestNewsNewsKannadaಕಸ್ಟಮ್ಸ್ಚಿನ್ನನವದೆಹಲಿಮಂಗಳೂರು
Advertisement
Next Article