ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾಳೆಯಿಂದ ಮಂಗಳೂರು –ಗೋವಾ ವಂದೇ ಭಾರತ್‌ ರೈಲು

ಮಂಗಳೂರು ಹಾಗೂ ಗೋವಾದ ಮಡಗಾಂವ್ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಡಿಸೆಂಬರ್ 30ರಂದು ಶನಿವಾರ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
11:24 AM Dec 29, 2023 IST | Ashitha S

ಮಂಗಳೂರು: ಮಂಗಳೂರು ಹಾಗೂ ಗೋವಾದ ಮಡಗಾಂವ್ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಡಿಸೆಂಬರ್ 30ರಂದು ಶನಿವಾರ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

Advertisement

ಭಾರತ್ ಎಕ್ಸ್​ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಈಗಾಗಲೇ ನಡೆದಿದ್ದು, ಯಶಸ್ವಿಯಾಗಿದೆ. ರೈಲಿನ ಆರಂಭಿಕ ಸಂಚಾರಕ್ಕೆ ದಕ್ಷಿಣ ರೈಲ್ವೆ ವಲಯವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಮಂಗಳೂರು‌ ಮಡಗಾಂವ್ ವಂದೇ ಭಾರತ್ ಎಕ್ಸ್​ಪ್ರೆಸ್ ಸೇರಿದಂತೆ 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

Advertisement

ಮಂಗಳೂರು ಮಡಗಾಂವ್ ರೈಲು 320 ಕಿಮೀ ಓಡಾಟ ಮಾಡಿದ್ದು, ಯಾವುದೇ ಸಮಸ್ಯೆಗಳು ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಡಗಾಂವ್ ಸಂಚಾರದ ನಡುವೆ ಉಡುಪಿ ಮತ್ತು ಕಾರವಾರದಲ್ಲಿ ಎರಡು ನಿಲುಗಡೆಗಳು ಇರಲಿವೆ.

Advertisement
Tags :
indiaLatestNewsNewsKannadaಉಡುಪಿಕರ್ನಾಟಕನವದೆಹಲಿಪ್ರಧಾನಿ ನರೇಂದ್ರ ಮೋದಿಮಂಗಳೂರುವಂದೇ ಭಾರತ್
Advertisement
Next Article