ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರು ಪ್ರೆಸ್‌ಕ್ಲಬ್ ಸಮಾಚಾರ ಬಿಡುಗಡೆಗೊಳಿಸಿದ ಶಾಸಕ ವೇದವ್ಯಾಸ ಕಾಮತ್

ಗ್ರಾಮ ವಾಸ್ತವ್ಯ, ಬ್ರಾೃಂಡ್ ಮಂಗಳೂರು ಸಹಿತ ದ.ಕ.ಜಿಲ್ಲೆಯ ಪತ್ರಕರ್ತರ ಸಂಘದ ಚಟುವಟಿಕೆಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದು, ಇಂತಹ ಕಾರ್ಯಗಳ ದಾಖಲೀಕರಣ ಅಗತ್ಯ. ಈ ಹಿನ್ನೆಲೆಯಲ್ಲಿ ‘ಮಂಗಳೂರು ಪ್ರೆಸ್‌ಕ್ಲಬ್ ಸಮಾಚಾರ’ ಇ- ಪತ್ರಿಕೆ ಒಂದು ಉತ್ತಮ ವೇದಿಕೆಯಾಗಲಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.
06:49 AM Jan 05, 2024 IST | Gayathri SG

ಮಂಗಳೂರು: ಗ್ರಾಮ ವಾಸ್ತವ್ಯ, ಬ್ರಾೃಂಡ್ ಮಂಗಳೂರು ಸಹಿತ ದ.ಕ.ಜಿಲ್ಲೆಯ ಪತ್ರಕರ್ತರ ಸಂಘದ ಚಟುವಟಿಕೆಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದು, ಇಂತಹ ಕಾರ್ಯಗಳ ದಾಖಲೀಕರಣ ಅಗತ್ಯ. ಈ ಹಿನ್ನೆಲೆಯಲ್ಲಿ ‘ಮಂಗಳೂರು ಪ್ರೆಸ್‌ಕ್ಲಬ್ ಸಮಾಚಾರ’ ಇ- ಪತ್ರಿಕೆ ಒಂದು ಉತ್ತಮ ವೇದಿಕೆಯಾಗಲಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.

Advertisement

ನಗರದ ಪತ್ರಿಕಾ ಭವನದಲ್ಲಿ (ಜ. 4) ಗುರುವಾರದಂದು ‘ಮಂಗಳೂರು ಪ್ರೆಸ್‌ಕ್ಲಬ್ ಸಮಾಚಾರ’ ಇ- ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ‘ ಹರೇಕಳ ಹಾಜಬ್ಬ, ಅಮೈ ಮಹಾಲಿಂಗ ನಾಯ್ಕ ಸಹಿತ ಅನೇಕ ಸಾಧಕರನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ದಕ್ಷಿಣ ಕನ್ನಡದ ಮಾಧ್ಯಮ ಪ್ರತಿನಿಧಿಗಳಿಗೆ ಸಲ್ಲುತ್ತದೆ ಎಂದರು.

ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಮಾತನಾಡಿ ಕನ್ನಡದ ಪತ್ರಿಕೋದ್ಯಮಕ್ಕೆ ಮುನ್ನುಡಿ ಬರೆದ ‘ಮಂಗಳೂರು ಸಮಾಚಾರ‘ ದಿಂದ ‘ಮಂಗಳೂರು ಪ್ರೆಸ್‌ಕ್ಲಬ್ ಸಮಾಚಾರ’ ತನಕ ಪತ್ರಿಕಾ ರಂಗದಲ್ಲಿ ಮಂಗಳೂರು ಐತಿಹಾಸಿಕ ಮಹತ್ವ ಹೊಂದಿದೆ ಎಂದರು.

Advertisement

ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಮುಖ್ಯ
ಅತಿಥಿಯಾಗಿದ್ದರು. ದ.ಕ.ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

Advertisement
Tags :
LatestNewsNewsKannadaಡಿ. ವೇದವ್ಯಾಸ ಕಾಮತ್ಮಂಗಳೂರುಶಾಸಕ
Advertisement
Next Article