ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರು: ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಥಮಿಕ ವಿಭಾಗದ ಶಾಲಾ ವಾರ್ಷಿಕೋತ್ಸವ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಜರುಗಿತು.
06:50 PM Dec 21, 2023 IST | Gayathri SG

ಮಂಗಳೂರು: ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಥಮಿಕ ವಿಭಾಗದ ಶಾಲಾ ವಾರ್ಷಿಕೋತ್ಸವ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಜರುಗಿತು.

Advertisement

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದ ನಿಟ್ಟೆ ವೈದ್ಯಕೀಯ ಕಾಲೇಜಿನ ಮನಶಾಸ್ತ್ರ ವಿಭಾಗದ ಹಿರಿಯ ಪ್ರೊಫೆಸರ್‌ ಡಾ. ಸತೀಶರಾವ್ ಮಾತನಾಡಿ ಇಂದಿನ ಸಮಾಜದಲ್ಲಿ ಶಾರೀರಿಕ ಆರೋಗ್ಯದಂತೆ ಮಾನಸಿಕ ಆರೋಗ್ಯವೂ ಬಹಳ ಮುಖ್ಯ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮವಾದ ಹವ್ಯಾಸಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನಸಿಕ ದೃಢತೆಯನ್ನು ಬೆಳೆಸಬೇಕು ಎಂದು ಹೇಳಿದರು.

ಉತ್ತಮವಾದ ಆಹಾರ ಪದ್ಧತಿಯನ್ನು ಬೆಳೆಸುವುದರೊಂದಿಗೆ ಯಾವುದಾದರೂ ಮಾನಸಿಕ ಸಮಸ್ಯೆಗಳು ಮಕ್ಕಳಲ್ಲಿ ಕಂಡುಬಂದರೆ ಅದರ ಬಗ್ಗೆ ಭಯ ಪಡದೆ ಸರಿಯಾದ ಪರಿಹಾರ ಮಾರ್ಗವನ್ನುಅನುಸರಿಸಬೇಕು ಎಂದರು. ಮಾನಸಿಕ ಒತ್ತಡದ ನಿವಾರಣೆಗೆ ಭಗವದ್ಗೀತೆ ಪಠಣ ಹಾಗೂ ಯೋಗವನ್ನು ರೂಢಿಸಿಕೊಳ್ಳುವುದು ಉತ್ತಮಎಂದು ಹೇಳಿದರು.

Advertisement

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಪ್ರಧಾನ ಸಲಹೆಗಾರರಮೇಶ ಕೆ ಮಾತನಾಡಿ ಶಕ್ತಿ ವಿದ್ಯಾಸಂಸ್ಥೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಗೊಳಿಸಲು ಸದಾ ಸಿದ್ಧವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಡಾ. ಕೆ. ಸಿ ನ್ಯಾಕ್ ನಮ್ಮ ಸಮಾಜಕ್ಕೆಉತ್ತಮವಾದ ಪ್ರಜೆಗಳನ್ನು ನೀಡುವುದು ನಮ್ಮ ಸಂಸ್ಥೆಯಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಕ್ತಿ ಪ.ಪೂ ಕಾಲೇಜಿನ ಪ್ರಾಂಶುಪಾಲ ವೆಂಕಟೇಶಮೂರ್ತಿ, ಶಕ್ತಿ ವಸತಿ ಶಾಲೆ ಪ್ರಾಂಶುಪಾಲ ರವಿಶಂಕರ ಹೆಗಡೆ, ಶಕ್ತಿ ಪೂರ್ವಪ್ರಾಥಮಿಕ ಶಾಲೆ ಸಂಯೋಜಕಿ ಪೆಟ್ರಿಷಿಯಾ ಪಿಂಟೋ ಉಪಸ್ಥಿತರಿದ್ದರು.

ಶಿಕ್ಷಕಿ ಡೋನಿಕಾ ಸ್ವಾಗತಿಸಿದರು, ಶಿಕ್ಷಕಿ ಪ್ರಿಯದರ್ಶಿನಿ ವಂದಿಸಿದರು. ಸಹ ಶಿಕ್ಷಕಿ ಚೇತನಾ ವಾರ್ಷಿಕ ವರದಿ ವಾಚಿಸಿದರು, ಶಿಕ್ಷಕಿ ಚೈತ್ರಾ ಅತಿಥಿ ಪರಿಚಯ ಮಾಡಿದರು. ವಿಜ್ಞಾನ ಶಿಕ್ಷಕಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Advertisement
Tags :
LatestNewsNewsKannadaಮಂಗಳೂರುಶಕ್ತಿ ವಿದ್ಯಾಸಂಸ್ಥೆ
Advertisement
Next Article