ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಶ್ಮೀರದಲ್ಲಿ ಉಗ್ರರ ನಡುವೆ ಗುಂಡಿನ ಚಕಮಕಿ: ಮಂಗಳೂರಿನ ಯೋಧ ಹುತಾತ್ಮ

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗೆ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 28 ವರ್ಷದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಮಂಗಳೂರು ಮೂಲದವರಾಗಿದ್ದು, ಇಲ್ಲಿಯೇ ಹುಟ್ಟಿ ಬಾಲ್ಯ ಕಳೆದು ಬಳಿಕ ಸೇನೆ ಸೇರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳೂರಿನಲ್ಲಿ ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ವೆಂಕಟೇಶ್ ಮತ್ತು ಅನುರಾಧ ದಂಪತಿಯ ಏಕೈಕ ಪುತ್ರನಾಗಿರುವ ಪ್ರಾಂಜಲ್ ಮಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದಾರೆ‌.
10:03 AM Nov 23, 2023 IST | Gayathri SG

ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗೆ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 28 ವರ್ಷದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಮಂಗಳೂರು ಮೂಲದವರಾಗಿದ್ದು, ಇಲ್ಲಿಯೇ ಹುಟ್ಟಿ ಬಾಲ್ಯ ಕಳೆದು ಬಳಿಕ ಸೇನೆ ಸೇರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳೂರಿನಲ್ಲಿ ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ವೆಂಕಟೇಶ್ ಮತ್ತು ಅನುರಾಧ ದಂಪತಿಯ ಏಕೈಕ ಪುತ್ರನಾಗಿರುವ ಪ್ರಾಂಜಲ್ ಮಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದಾರೆ‌.

Advertisement

ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದ ಪ್ರಾಂಜಲ್ ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್ ಮಾಡುತ್ತಿದ್ದಾರೆ. 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿರುವ ಪ್ರಾಂಜಲ್, ಬುಧವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ವೀರಮರಣ ಹೊಂದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪ್ರಾಂಜಲ್ ಜೊತೆಗೆ 9 ಪಿಎಆರ್‌ಎ ಕ್ಯಾಪ್ಟನ್ ಶುಭಂ, ಮತ್ತು ಹವಾಲ್ದಾರ್ ಮಜೀದ್ ಮೃತರಾಗಿದ್ದಾರೆ. ಐದರಿಂದ ಆರು ಮಂದಿ ಇರುವ ಉಗ್ರರ ಗುಂಪು ದಾಳಿ ಮಾಡಿದ್ದು ಉಗ್ರರ ಬೇಟೆಗೆ ಭಾರತೀಯ ಸೇನೆ ಕಾರ್ಯಾಚರಣೆಗೆ ಇಳಿದಿದೆ‌. ಈ ವೇಳೆ ಈ ಘಟನೆ ಸಂಭವಿಸಿದೆ.

Advertisement

Advertisement
Tags :
BreakingNewsಮಂಗಳೂರುಯೋಧ ಹುತಾತ್ಮ
Advertisement
Next Article