ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಣಿಪಾಲ: ಎಬಿವಿಪಿಯಿಂದ ಡಿಸಿ ಕಚೇರಿ ಮುತ್ತಿಗೆಗೆ ಯತ್ನ

ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಉಡುಪಿ ನಗರದ ವತಿಯಿಂದ ಡಿಸಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
05:17 PM Dec 15, 2023 IST | Ramya Bolantoor

ಉಡುಪಿ: ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಉಡುಪಿ ನಗರದ ವತಿಯಿಂದ ಡಿಸಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

Advertisement

ಜಿಲ್ಲಾಧಿಕಾರಿ ಸಮಯಕ್ಕೆ ಸರಿಯಾಗಿ ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಾಗ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ವಿದ್ಯಾರ್ಥಿಗಳು ಡಿಸಿ ಕಚೇರಿ ಮುತ್ತಿಗೆಗೆ ಪ್ರಯತ್ನಿಸಿದರು. ಆದರೆ ಪೊಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಗೇಟಿನ ಮುಂಭಾಗದಲ್ಲಿ ತಡೆದರು. ಆ ಬಳಿಕ ಅಪರ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, ಅತಿಥಿ ಉಪನ್ಯಾಸಕರ ಸಮಸ್ಯೆಯಿಂದಾಗಿ ನಮ್ಮ ಮಂಗಳೂರು ಯುನಿವರ್ಸಿಟಿಯ ಕೆಲವು ಕಾಲೇಜುಗಳಲ್ಲಿ ನಾಲ್ಕು ತಿಂಗಳಲ್ಲಿ ನಡೆಯಬೇಕಾದ ಪಠ್ಯವನ್ನು ಎರಡು ತಿಂಗಳಲ್ಲಿ ಮುಗಿಸುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆಗಳಾಗುತ್ತಿದೆ. ಆದಷ್ಟು ಬೇಗ ಅತಿಥಿ ಶಿಕ್ಷಕರನ್ನು ನೇಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

Advertisement

ಪ್ರತಿಭಟನೆಯಲ್ಲಿ ತಾಲೂಕು ಸಂಚಾಲಕ ಅಜಿತ್ ಜೋಗಿ, ನಗರ ಸಹಕಾರ್ಯದರ್ಶಿ ಕಾರ್ತಿಕ್, ನಗರ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ ಸಹ ಪ್ರಮುಖ್ ಕೃತಿ ಮತ್ತು ಪ್ರಮುಖರಾದ ಸ್ವಸ್ತಿಕ್, ನವೀನ್, ಮಂಗಳಗೌರಿ, ಪ್ರಶ್ಮ, ಶ್ರೀಹರಿ, ಅನಂತಕೃಷ್ಣ, ಆದಿತ್ಯ, ಸುಮುಖ, ಮಾಣಿಕ್ಯ, ರವಿಚಂದ್ರ ಪಾಲ್ಗೊಂಡಿದ್ದರು.

Advertisement
Tags :
LatestNewsNewsKannadaಉಡುಪಿಮಣಿಪಾಲ
Advertisement
Next Article