ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ ಜಡಿದ ಘಟನೆ ನಡೆದಿದೆ. 
11:23 AM May 10, 2024 IST | Chaitra Kulal

ಬೆಂಗಳೂರು: ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ ಜಡಿದ ಘಟನೆ ನಡೆದಿದೆ.

Advertisement

ಬಿಗಿ ಪೊಲೀಸ್ ಭದ್ರತೆಯೊಂದಿಗೆ ಆಗಮಿಸಿದ ಬಿಬಿಎಂಪಿ ಅಧಿಕಾರಿಗಳ ತಂಡ ಮಂತ್ರಿಮಾಲ್‌ಗೆ ಬೀಗ ಹಾಕಿದೆ. ಇವತ್ತಿನಿಂದ ಸಾಲು ಸಾಲು ರಜೆ ಇರುವುದರಿಂದ ವೀಕೆಂಡ್‌ನಲ್ಲಿ ಮಾಲ್‌ಗೆ ಹೆಚ್ಚಿನ ಜನ ಬರುತ್ತಿದ್ದರು.‌ ಈ ಹಿಂದೆಯೂ 8 ಬಾರಿ ಮಾಲ್‌ಗೆ ಬಿಬಿಎಂಪಿ ಬೀಗ ಹಾಕಿತ್ತು.

ಮಾಲ್‌ನವರು ಕೋರ್ಟ್ ಮೂಲಕ ಬೀಗ ಓಪನ್ ಮಾಡಿಸಿಕೊಂಡು ವ್ಯವಹಾರ ಮಾಡುತ್ತಿದ್ದರು. ‌ಇಂದಿನಿಂದ ಭಾನುವಾರದ ವರೆಗೆ ಸರ್ಕಾರಿ ರಜೆ ಇರುವುದರಿಂದ ಹೆಚ್ಚಿನ ಗ್ರಾಹಕರು ಬರುವ ನಿರೀಕ್ಷೆ ಇತ್ತು. ಮಾಲ್ ಇವತ್ತು ಓಪನ್ ಆಗಬೇಕಾದರೆ ಬಾಕಿ ಉಳಿಸಿಕೊಂಡಿರುವ ತೆರಿಗೆ ಕಟ್ಟಲೇಬೇಕಾದ ಪರಿಸ್ಥಿತಿ ಇದೆ. ಮಾಲ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಬಂದು ಕಾಯುತ್ತಿದ್ದು, ಬೀಗ ಹಾಕಿರುವುದನ್ನು ನೋಡಿ ಹೊರಗಡೆಯೇ ನಿಂತಿದ್ದಾರೆ.

Advertisement

Advertisement
Tags :
BANGALOREBBMPLatestNewsMANTRI MALLNewsKarnatakaPROPERTY TAX
Advertisement
Next Article