ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸರ್ಕಾರಿ ಬಸ್‌ ಗಳಲ್ಲಿ ಇನ್ಮುಂದೆ ಮಾಸ್ಕ್‌ ಕಡ್ಡಾಯ

ನೆರೆಯ ಕೇರಳ, ತಮಿಳುನಾಡಿನಲ್ಲಿ ಕೋವಿಡ್‌ ಹಾವಳಿ ಹೆಚ್ಚಿದೆ. ರಾಜ್ಯದಲ್ಲಿಯೂ ಅದಕ್ಕಾಗಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ.
02:46 PM Dec 20, 2023 IST | Ramya Bolantoor

ಬೆಂಗಳೂರು: ನೆರೆಯ ಕೇರಳ, ತಮಿಳುನಾಡಿನಲ್ಲಿ ಕೋವಿಡ್‌ ಹಾವಳಿ ಹೆಚ್ಚಿದೆ. ರಾಜ್ಯದಲ್ಲಿಯೂ ಅದಕ್ಕಾಗಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

Advertisement

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ. ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ.

Advertisement
Advertisement
Tags :
COVID 19KARNATAKALatestNewsNewsKannadaಬೆಂಗಳೂರು
Advertisement
Next Article