ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.
07:24 AM May 20, 2024 IST | Nisarga K
ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

Advertisement

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Advertisement

Advertisement
Tags :
CANCLLEDCRICKET MATCHguvahatiHEAVY RAINLatsestNewsNewsKarnataka
Advertisement
Next Article