For the best experience, open
https://m.newskannada.com
on your mobile browser.
Advertisement

ಮಯಾಂಕ್​ ಅಗರ್ವಾಲ್​ ಅಸ್ವಸ್ಥ ; ಐಸಿಯುನಲ್ಲಿ ಚಿಕಿತ್ಸೆ

ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.
07:03 PM Jan 30, 2024 IST | Ramya Bolantoor
ಮಯಾಂಕ್​ ಅಗರ್ವಾಲ್​  ಅಸ್ವಸ್ಥ   ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಯಾಂಕ್ ಅವರನ್ನು ಕೂಡಲೇ ​ತ್ರಿಪುರಾದ ಅಗರ್ತಲಾ​ ಎಎಲ್​ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ಪ್ರಯಾಣ ಮಾಡುವಾಗ ಈ ಘಟನೆ ನಡೆದಿದೆ.

Advertisement

ತ್ರಿಪುರ ವಿರುದ್ಧ ರಣಜಿ ಪಂದ್ಯವನ್ನಾಡಿದ್ದ ಕರ್ನಾಟಕ ತಂಡ ತನ್ನ ಮುಂದಿನ ಪಂದ್ಯವನ್ನು ರೈಲ್ವೇಸ್ ವಿರುದ್ಧ ಗುಜರಾತ್​ನ ಸೂರತ್​ನಲ್ಲಿ ಆಡಬೇಕಿತ್ತು. ಉಭಯ ತಂಡಗಳ ಈ ಪಂದ್ಯ ಇದೇ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕಾಗಿ ಕರ್ನಾಟಕ ರಣಜಿ ತಂಡದ ಆಟಗಾರರು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ವಿಮಾನದಲ್ಲಿ  ಮಯಾಂಕ್ ನೀರು ಕುಡಿಯುತ್ತಿದ್ದಂತೆ ಅವರ ಗಂಟಲಿನಲ್ಲಿ ಉರಿಯ ಅನುಭವವಾಗಿದೆ. ಹಾಗೆಯೇ ಬಾಯಿ, ನಾಲಿಗೆ ಸುಟ್ಟಂತ ಅನುಭವವಾಗಿದೆ. ಹೀಗಾಗಿ ಮಯಾಂಕ್​ ಮಾತನಾಡಲು ಸಾಧ್ಯವಾಗದೆ ವಿಮಾನದಲ್ಲೇ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

Advertisement
Tags :
Advertisement