ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಚೇತರಿಕೆ; ಅನಾರೋಗ್ಯದ ಕಾರಣ ಪಂದ್ಯದಿಂದ ಹೊರಗೆ

ವಿಷಕಾರಿ ದ್ರವ ಸೇವನೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಯಾಂಕ್ ಅಗರ್ವಾಲ್ ಫೆ.೨ರಿಂದ ಶುರುವಾಗಲಿರುವ ರೈಲ್ವೇಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಪಂದ್ಯದಲ್ಲಿ ಕರ್ನಾಟಕದ ತಂಡವನ್ನು ಯುವ ಆಟಗಾರ ನಿಕಿನ್ ಜೋಸ್ ಮುನ್ನಡೆಸುವ ಸಾಧ್ಯತೆಯಿದೆ.
07:03 PM Jan 31, 2024 IST | Maithri S

ಗುಜರಾತ್: ವಿಷಕಾರಿ ದ್ರವ ಸೇವನೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಯಾಂಕ್ ಅಗರ್ವಾಲ್ ಫೆ.೨ರಿಂದ ಶುರುವಾಗಲಿರುವ ರೈಲ್ವೇಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಪಂದ್ಯದಲ್ಲಿ ಕರ್ನಾಟಕದ ತಂಡವನ್ನು ಯುವ ಆಟಗಾರ ನಿಕಿನ್ ಜೋಸ್ ಮುನ್ನಡೆಸುವ ಸಾಧ್ಯತೆಯಿದೆ.

Advertisement

ತ್ರಿಪುರ ವಿರುದ್ಧದ ರಣಜಿ ಪಂದ್ಯದ ಬಳಿಕ ಕರ್ನಾಟಕ ತಂಡ ಸೂರತ್ ಗೆ ತೆರಳಲು ಇಂಡಿಗೋ ವಿಮಾನವೇರಿತ್ತು. ಈ ವೇಳೆ ವಿಮಾನದಲ್ಲಿದ್ದ ದ್ರವವನ್ನು ನೀರೆಂದು ಭಾವಿಸಿ ಸೇವಿಸಿದ ಮಯಾಂಕ್ ರ ಗಂಟಲಲ್ಲಿ ಉರಿ ಕಾಣಿಸಿಕೊಂಡಿದ್ದು, ಅವರನ್ನು ಕೂಡಲೇ ಎಎಲ್​ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರ ಬಾಯಲ್ಲಿ ಊತ ಹಾಗೂ ಸುಟ್ಟು ಗಾಯಗಳು ಕಂಡು ಬಂದಿದೆ ಎಂದು ವರದಿಯಾಗಿದ್ದು, ಮುಂದಿನ 48 ಗಂಟೆಗಳ ಕಾಲ ಅವರಿಗೆ ಮಾತನಾಡಲು ಸಾಧ್ಯವಿಲ್ಲ ಎಂದು ತಿಳಿದು ಬಂದಿದೆ.

Advertisement

ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆದ ಬಳಿಕ ಮಯಾಂಕ್ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಕರ್ನಾಟಕ ತಂಡದ ಮ್ಯಾನೇಜರ್ ರಮೇಶ್ ತಿಳಿಸಿದ್ದು, ಮುಂದಿನ ಪಂದ್ಯಗಳಲ್ಲಿ ಅವರು ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

Advertisement
Tags :
indiaLatestNewsMayank AgarwalNewsKannadaRANAJI
Advertisement
Next Article