For the best experience, open
https://m.newskannada.com
on your mobile browser.
Advertisement

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.
10:19 AM May 11, 2024 IST | Ashika S
ತಾಯಿ  ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

Advertisement

ಕೊಲೆ ಮಾಡಿದ ಆರೋಪಿಯನ್ನು ಅನುರಾಗ್ ಸಿಂಗ್ ಎಂದು ಗುರುತಿಸಲಾಗಿದೆ. ತಾಯಿ ಸಾವಿತ್ರಿ ದೇವಿ (62), ಪತ್ನಿ ವೀರೇಂದ್ರ ಸಿಂಗ್ (40), ಪುತ್ರಿ ಅಶ್ವಿ (12), ಪುತ್ರಿ ಅರ್ನಿ (8), ಅದ್ವಿಕ್ (4) ಹತ್ಯೆಯಾದವರು.

ಆರೋಪಿ ತಾಯಿ ಮೇಲೆ ಗುಂಡು ಹಾರಿಸಿ ಕೊಲೆಗೈದರೆ, ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ್ದಾನೆ ಹಾಗೂ ಮೂವರು ಮಕ್ಕಳನ್ನು ಟೆರಸ್​ನಿಂದ ಎಸೆದಿದ್ದಾನೆ. ಪರಿಣಾಮ ಅವರು ಕೂಡ ಗಂಭೀರವಾಗಿ ಗಾಯಗೊಂಡು ಪ್ರಾಣಬಿಟ್ಟಿದ್ದಾರೆ.

Advertisement

ಬಳಿಕ ಆರೋಪಿ ತಾನೂ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೊಲೀಸ್ ಅಧಿಕಾರಿಗಳ ಪ್ರಾಥಮಿಕ ವರದಿ ಪ್ರಕಾರ, ಆತ ಮದ್ಯ ವ್ಯಸನಿ ಹಾಗೂ ಮಾನಸಿಕ ಅಸ್ವಸ್ಥ ಕೂಡ ಆಗಿದ್ದ ಎಂದು ತಿಳಿದು ಬಂದಿದೆ.

Advertisement
Tags :
Advertisement