For the best experience, open
https://m.newskannada.com
on your mobile browser.
Advertisement

ಮತ್ತೆ ಕನ್ನಡಿಗರ ಒಕ್ಕಲೆಬ್ಬಿಸಿದ ಗೋವಾ ಸರ್ಕಾರ

ಗೋವಾ ಸರ್ಕಾರ ಇಲ್ಲಿನ ವಲಸೆ ಕನ್ನಡಿಗರ ಒಕ್ಕಲೆಬ್ಬಿಸುವ ಕಾರ್ಯವನ್ನು ಮತ್ತೆ ಮುಂದುವರಿಸಿದ್ದು, ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿದೆ.
10:25 AM Apr 15, 2024 IST | Ashitha S
ಮತ್ತೆ ಕನ್ನಡಿಗರ ಒಕ್ಕಲೆಬ್ಬಿಸಿದ ಗೋವಾ ಸರ್ಕಾರ

ಪಣಜಿ: ಗೋವಾ ಸರ್ಕಾರ ಇಲ್ಲಿನ ವಲಸೆ ಕನ್ನಡಿಗರ ಒಕ್ಕಲೆಬ್ಬಿಸುವ ಕಾರ್ಯವನ್ನು ಮತ್ತೆ ಮುಂದುವರಿಸಿದ್ದು, ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿದೆ.

Advertisement

‘ನಾಲ್ಕು ದಶಕಗಳಿಂದ ಇಲ್ಲಿ ವಾಸವಾಗಿದ್ದೇವೆ. ಈಗ ಇದ್ದಕ್ಕಿದ್ದಂತೆ ಎದ್ದು ಹೋಗಿ ಎಂದರೆ ನಾವು ಎಲ್ಲಿಗೆ ಹೋಗಬೇಕು’ ಎಂದು ಪ್ರತಿರೋಧ ಒಡ್ಡಿದವರ ಮೇಲೆ ಪೊಲೀಸರು ಲಾಠಿ ಬೀಸಿ ಮನೆಯಿಂದ ಹೊರಗೆ ಓಡಿಸಿದ್ದಾರೆ.

ಕೆಲವೇ ಗಂಟೆಗಳಲ್ಲಿ ಧ್ವಂಸವಾದ ಮನೆಗಳ ಎದುರು ಗೋವ ಕನ್ನಡಿಗರು ರೋಧಿಸುತ್ತಿದ್ದಾರೆ. ದವಸ-ಧಾನ್ಯ, ಬಟ್ಟೆ-ಹಾಸಿಗೆಗಳೂ ಮನೆಯ ಅವಶೇಷಗಳ ಅಡಿ ಸಿಲುಕಿವೆ. ಯಾರೋ ಕೊಟ್ಟ ತಿಂಡಿ, ಊಟ ಸೇವಿಸುತ್ತ ದಿಕ್ಕುಗಾಣದೇ ಸಮಯ ದೂಡುತ್ತಿದ್ದಾರೆ.

Advertisement

ಈ ಕನ್ನಡಿಗರ ಮನೆಗಳನ್ನು ಧ್ವಂಸ ಮಾಡಿದ ವಿಷಯ ತಿಳಿದು ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಸಂತ್ರಸ್ತರಿಗೆ ರಕ್ಷಣೆ ನೀಡುವಂತೆ ಮಾಡಿಕೊಂಡ ಮನವಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ ಸ್ಪಂದಿಸಿದ್ದಾರೆ. ಸಂತ್ರಸ್ತರಿಗೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಇನ್ನು ಗೋವಾ ನಿವಾಸಿ ಕನ್ನಡಿಗರನ್ನು ಇಲ್ಲಿನ ಸರ್ಕಾರ ನಿರ್ದಯವಾಗಿ ಒಕ್ಕಲೆಬ್ಬಿಸುತ್ತಿರುವುದು ಇದು ಆರನೇ ಬಾರಿ. ಹೀಗೆ ಬೀದಿಗೆ ತಳ್ಳಿದವರಿಗೆ ಈವರೆಗೆ ಯಾವುದೇ ಪುನರ್ವಸತಿ ಕಲ್ಪಿಸಿಲ್ಲ. ಮೊದಲು ಪುನರ್ವಸತಿ ಕಲ್ಪಿಸಿ, ಬಳಿಕ ಅತಿಕ್ರಮಣ ತೆರವುಗೊಳಿಸಿ ಎಂದು ನ್ಯಾಯಾಲಯ ನಿರ್ದೇಶನ ನೀಡಿದರೂ ಅದಕ್ಕೆ ಕಿವಿಗೊಟ್ಟಿಲ್ಲ.

Advertisement
Tags :
Advertisement