For the best experience, open
https://m.newskannada.com
on your mobile browser.
Advertisement

ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಪ್ರಲ್ಹಾದ ಜೋಶಿ

ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ ಎಂದು ಅಯೋಧ್ಯೆಯ ರಾಮ ಮಂದಿರದ ಆಹ್ವಾನದ ಮಂತ್ರಾಕ್ಷತೆಯನ್ನು ಅನ್ನಭಾಗ್ಯ ಅಕ್ಕಿಯಲ್ಲೇ ಕೊಡುತ್ತಿದ್ದಾರೆ ಎಂಬ ಡಿಸಿಎಂ  ಡಿಕೆ ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು  ನೀಡಿದ್ದಾರೆ.
08:19 PM Jan 08, 2024 IST | Ashika S
ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು: ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ ಎಂದು ಅಯೋಧ್ಯೆಯ ರಾಮ ಮಂದಿರದ ಆಹ್ವಾನದ ಮಂತ್ರಾಕ್ಷತೆಯನ್ನು ಅನ್ನಭಾಗ್ಯ ಅಕ್ಕಿಯಲ್ಲೇ ಕೊಡುತ್ತಿದ್ದಾರೆ ಎಂಬ ಡಿಸಿಎಂ  ಡಿಕೆ ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು  ನೀಡಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿದ ಜೋಶಿ, “ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು ಒಂದು ಸಂತೋಷವೇ. ಆದರೆ ಅವರು ಸಂತೋಷ ಪಡುತ್ತಿರುವ ಕಾರಣ ಮಾತ್ರ ವಿಚಿತ್ರ” ಎಂದರು.

ರಾಮನ ಅಕ್ಷತೆ ಕಾಳಿನ ಬಗ್ಗೆಯೂ ಸುಳ್ಳು ಹೇಳಿದ್ದಾರೆ. ಈ ಹಿಂದಿನಿಂದಲೂ ರಾಮನ ಬಗ್ಗೆ ಸುಳ್ಳು ಹೇಳಿಕೊಂಡೇ ಬರುತ್ತಿದ್ದಾರೆ. ರಾಮನೇ ಕಾಲ್ಪನಿಕ ಅಂತ ಹಿಂದೆ ಅಂದಿದ್ದರು. ಇವತ್ತು ಅವರು ಕೊಡಲಾರದ ಅಕ್ಕಿ ಮಂತ್ರಾಕ್ಷತೆ ಎಂದಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸುಳ್ಳು ಹೇಳಿಕೆ ಕೊಟ್ಟಿದ್ದಾರೆ ಎಂದರು.

Advertisement

“ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ. ಕೊಡಲಾರದ ಅಕ್ಕಿಯಲ್ಲಿ ಅಕ್ಷತೆ ಆಗುತ್ತಿದೆ ಎಂದು ಪ್ರಭು ರಾಮನ ಅಕ್ಷತಾ ವಿಷಯದಲ್ಲೂ ಸುಳ್ಳು ಹೇಳುವ ಪಾಪಿಗಳು ನೀವು” ಎಂದು ಡಿಕೆ ಶಿವಕುಮಾರ್ ವಿರುದ್ಧ ಜೋಶಿ ವಾಗ್ದಾಳಿ ನಡೆಸಿದ್ದಾರೆ.

Advertisement
Tags :
Advertisement