ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಚಿವ ಸತೀಶ್‌ ಜಾರಕಿಹೊಳಿ ನೇತೃತ್ವದ ದಲಿತರ ಟೀಮ್‌ ದೆಹಲಿಗೆ ಹೋಗಿದ್ದೇಕೆ

ಕಾಂಗ್ರೆಸ್‌ ಒಳಬೇಗುದಿ ನಿಂತಹಾಗೆ ಕಾಣುತ್ತಿಲ್ಲ. ಇದೀಗ ಕಾಂಗ್ರೆಸ್‌ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ ಎಂಬ ಮಾಹಿತಿ ದೊರೆತಿದೆ.
10:36 PM Dec 25, 2023 IST | Ashitha S

ಬೆಂಗಳೂರು: ಕಾಂಗ್ರೆಸ್‌ ಒಳಬೇಗುದಿ ನಿಂತಹಾಗೆ ಕಾಣುತ್ತಿಲ್ಲ. ಇದೀಗ ಕಾಂಗ್ರೆಸ್‌ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ ಎಂಬ ಮಾಹಿತಿ ದೊರೆತಿದೆ.

Advertisement

ಲೋಕಸಭಾ ಚುನಾವಣೆಗೂ ಮುನ್ನ ಶತಾಯ ಗತಾಯ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಲೇಬೇಕು ಎಂದು ಹೈಕಮಾಂಡ್ ಮನವೊಲಿಸಲು ಉಪಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟಿರುವ ಸಚಿವರುಗಳು ನಿರ್ಧರಿಸಿದ್ದು, ಆದರಂತೆ ಸತೀಶ್ ಜಾರಕಿಹೊಳಿ ಅವರು ಇಂದು ದಲಿತ ನಾಯಕರುಗಳ ಜತೆ ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ರಾಹುಲ್‌ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಇವರುಗಳನ್ನು ಭೇಟಿ ಮಾಡಿ ಮೂವರು ಉಪಮುಖ್ಯಮಂತ್ರಿಗಳ ನೇಮಕಾತಿ ಮಾಡಿ ಎಂದು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

Advertisement

Advertisement
Tags :
bengaluruBJPBreakingNewsCongressGOVERNMENTindiaKARNATAKALatestNewsಕರ್ನಾಟಕನವದೆಹಲಿಬಿಜೆಪಿಬೆಂಗಳೂರುಸತೀಶ್ ಜಾರಕಿಹೊಳಿ
Advertisement
Next Article